
ಸುಕ್ಮಾ, ಛತ್ತೀಸ್’ಗಢ (ಮಾ.11): ಛತ್ತೀಸ್’ಗಢದ ಸುಕ್ಮಾ ಜಿಲ್ಲೆಯಲ್ಲಿ ಮಾವೋವಾದಿಗಳ ದಾಳಿಯಲ್ಲಿ ಗಾಯಗೊಂಡಿರುವ ಸಿಆರ್’ಪಿಎಫ್ ಯೋಧರನ್ನು ಕೇಂದ್ರ ಗೃಹಮಂತ್ರಿ ಭೇಟಿ ಮಾಡಿದ್ದಾರೆ.
ಹುತಾತ್ಮ ಯೋಧರಿಗೆ ಶ್ರದ್ಧಾಂಜಲಿ ಸಲ್ಲಿಸಿದ ರಾಜನಾಥ್ ಸಿಂಗ್, ಗಂಭೀರವಾಗಿ ಗಾಯಗೊಂಡು ಇಲ್ಲಿನ ನಾರಯಣ ಅಸ್ಪತ್ರೆಯಲ್ಲಿ ದಾಖಲಾಗಿರುವ ಯೋಧರನ್ನು ಭೇಟಿಯಾಗಿ, ಆರೋಗ್ಯ ಸ್ಥಿತಿ ವಿಚಾರಿಸಿದ್ದಾರೆ.
ಮಾವೋವಾದಿಗಳ ದಾಳಿಗೆ 12 ಮಂದಿ ಯೋಧರು ಮೃತಪಟ್ಟಿದ್ದಾರೆ. ದಾಳಿಯನ್ನು ಖಂಡಿಸಿರುವ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹಮಂತ್ರಿ ರಾಜನಾಥ್ ಸಿಂಗ್, ಹುತಾತ್ಮ ಯೋಧರ ಕುಟುಂಬಗಳಿಗೆ ಸಂತಾಪ ವ್ಯಕ್ತಪಡಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.