
ನವದೆಹಲಿ, [ಜ.09]: ತೀವ್ರ ವಿರೋಧದ ನಡುವೆ ರಾಜ್ಯಸಭೆಯಲ್ಲಿ ಮೇಲ್ವರ್ಗದ ಮೀಸಲು ಐತಿಹಾಸಿಕ ಮಸೂದೆ ಅಂಗೀಕಾರವಾಗಿದೆ.
ಇಂದು [ಬುಧವಾರ] ರಾತ್ರಿ ರಾಜ್ಯಸಭಾ ಕಲಾಪದಲ್ಲಿ ಈ ವಿಧೇಯಕವನ್ನ ಮಂಡನೆ ಮಾಡಲಾಗಿತ್ತು. ಸುದೀರ್ಘ ಚರ್ಚೆಯ ಬಳಿಕ ವೋಟಿಂಗ್ ಪ್ರಕ್ರಿಯೆ ನಡೆಯಿತು.
ಮೇಲ್ವರ್ಗ ಮೀಸಲಾತಿ ಪಡೆಯಲು 3 ಮಾನದಂಡಗಳು, ಯಾರಿಗೆ ಲಾಭ? ಇಲ್ಲಿದೆ ಮಾಹಿತಿ
ಬಿಲ್ ಪರ ಹೆಚ್ಚು ಮತಗಳು ಬೀಳುವ ಮೂಲಕ ರಾಜ್ಯಸಭೆಯಲ್ಲಿಯೂ ಆರ್ಥಿಕವಾಗಿ ಹಿಂದುಳಿದ ಮೇಲ್ಜಾತಿಯವರಿಗೆ ಉದ್ಯೋಗ ಹಾಗೂ ಶಿಕ್ಷಣದಲ್ಲಿ ಶೇ.10 ರಷ್ಟು ಮೀಸಲಾತಿ ಬಿಲ್ ಪಾಸ್ ಆಗಿದೆ.
ಮಸೂದೆಯನ್ನು ಸಂಸದೀಯ ಸಮಿತಿ ಪರಾಮರ್ಶೆಗೆ ಕಳುಹಿಸಿಬೇಕು ಎಂಬ ವಿಪಕ್ಷಗಳು ಮಂಡಿಸಿದ್ದ ಕೋರಿಕೆಗೆ ಸೋಲುಂಟಾಯಿತು.
ಮೇಲ್ವರ್ಗಕ್ಕೆ ಖಾಸಗಿ ಉನ್ನತ ಶಿಕ್ಷಣ ಸಂಸ್ಥೆಗಳಲ್ಲೂ ಮೀಸಲು!
ವಿಪಕ್ಷಗಳ ಈ ಕೋರಿಕೆಯ ವಿರುದ್ಧ 155 ಮತಗಳು ಮತ್ತು ಪರ 18 ಮತಗಳು ಚಲಾವಣೆಯಾಗುವ ಮೂಲಕ ಮೇಲ್ಜಾತಿಯವರಿಗೆ ಮೀಸಲಾತಿ ನೀಡುವ ಬಿಲ್ ಪಾಸ್ ಆಗಿದೆ.
ಆರ್ಥಿಕವಾಗಿ ಹಿಂದುಳಿದ ಮೇಲ್ವರ್ಗದವರಿಗೆ ಉದ್ಯೋಗ ಹಾಗೂ ಶಿಕ್ಷಣದ ಮೇಲಿನ ಮೀಸಲಾತಿ ಶೇ.10 ರಷ್ಟು ಮೀಸಲಿಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಇದು ವಾರ್ಷಿಕ ಆದಾಯ 8 ಲಕ್ಷಕ್ಕಿಂತ ಕಡಿಮೆ ಇರೋರಿಗೆ ಅನ್ವಯವಾಗಲಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ