
ನವದೆಹಲಿ (ನ.25): ಸಂಸತ್ತಿನ ಉಭಯ ಕಲಾಪದಲ್ಲಿ ನೋಟು ನಿಷೇಧ ಗದ್ದಲ ಮುಂದುವರೆದಿದ್ದು, ಪ್ರಧಾನಿ ನರೇಂದ್ರ ಮೋದಿ ಅನುಪಸ್ಥಿತಿ ಹಾಗೂ ವಿಪಕ್ಷಗಳ ಬಗ್ಗೆ ಅವರ ಹೇಳಿಕೆ ವಿಚಾರದಲ್ಲಿ ವಾಗ್ವಾದ ಉಂಟಾ ಹಿನ್ನೆಲೆಯಲ್ಲಿ ಕಲಾಪವನ್ನು ಮಧ್ಯಾಹ್ನ 2.30ರವರೆಗೆ ಮುಂದೂಡಲಾಗಿದೆ.
ರಾಜ್ಯಸಭೆ ಕಲಾಪ ಆರಂಭವಾಗುತ್ತಿದ್ದಂತೆಯೇ ನೋಟು ನಿಷೇಧ ಕುರಿತಂತೆ ತಮ್ಮ ವಿರೋಧ ವ್ಯಕ್ತಪಡಿಸಿದ ಪ್ರತಿಪಕ್ಷ ಮುಖಂಡರು ಈಗಲೇ ಪ್ರಧಾನಿ ನರೇಂದ್ರ ಮೋದಿ ಅವರು ಕಲಾಪಕ್ಕೆ ಆಗಮಿಸಿ ಈ ಬಗ್ಗೆ ಪ್ರತಿಕ್ರಿಯೆ ನೀಡಬೇಕು. ಅವರು ಕಲಾಪಕ್ಕೆ ಆಗಮಿಸದಿದ್ದರೇ ಕಲಾಪವನ್ನು ನಡೆಸಲು ಬಿಡುವುದಿಲ್ಲ ಎಂದು ವಿಪಕ್ಷ ಮುಖಂಡರ ಕಿಡಿಕಾರಿದ್ದಾರೆ.
ಈ ವೇಳೆ ಮಾತನಾಡಿದ ಕಾಂಗ್ರೆಸ್ ಸದಸ್ಯ ಗುಲಾಂ ನಬಿ ಅಜಾದ್ ಅವರು, ಪ್ರಧಾನಿ ನರೇಂದ್ರ ಮೋದಿ ಅವರು ಕಲಾಪಕ್ಕೆ ಪದೇ ಪದೇ ಗೈರಾಗುವ ಮೂಲಕ ಸದನಕ್ಕೆ ಅಪಮಾನ ಮಾಡಿದ್ದಾರೆ. ಹೀಗಾಗಿ ಅವರು ಸದನದ ಕ್ಷಮೆ ಯಾಚಿಸಬೇಕು ಎಂದು ಆಗ್ರಹಿಸಿದರು.
ಆಜಾದ್ ಅವರ ಹೇಳಿಕೆಗೆ ಬಿಜೆಪಿ ಸದಸ್ಯರಿಂದ ಭಾರಿ ವಿರೋಧ ವ್ಯಕ್ತವಾಯಿತು. ಈ ವೇಳೆ ಉಭಯ ನಾಯಕರು ಪರಸ್ಪರ ವಾಗ್ವಾದ ನಡೆಸಿದರು. ಈ ಹಿನ್ನಲೆಯಲ್ಲಿ ಉಪಸಭಾಪತಿ ಪಿಜೆ ಕುರಿಯನ್ ಅವರು ಕಲಾಪವನ್ನು ಮೊದಲು 12 ಗಂಟೆಗೆ ಮುಂದೂಡಿದರು.
ಕಲಾಪ ಆರಂಭವಾಗುತ್ತಿದ್ದಂತೆ, ಗುಲಾಂ ನಬಿ ಆಝಾದ್ ಪ್ರಧಾನಿಯವರು ಬೇಳಗ್ಗೆ ಪುಸ್ತಕ ಬಿಡುಗಡೆ ಸಂದರ್ಭದಲ್ಲಿ ವಿಪಕ್ಷ ಕುರಿತು ನೀಡಿರುವ ಹೇಳಿಕೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದಾಗ ಆಡಳಿತ ಪಕ್ಷದ ಸಂಸದರು ವಾಗ್ವಾದ ಆರಂಭಿಸಿದ್ದಾರೆ. ಸಭಾಧ್ಯಕ್ಷರು ಎಷ್ಟೇ ಮನವಿ ಮಾಡಿಕೊಂಡರೂ ಸಂಸದರು ಸುಮ್ಮನಿರಲು ಒಪ್ಪದಿದ್ದಾಗ ಅನ್ಯ ಮಾರ್ಗವಿಲ್ಲದೇ ಕಲಾಪವನ್ನು ಮಧ್ಯಾಹ್ನ 2.30ಕ್ಕೆ ಮುಂದೂಡಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.