
ನವದೆಹಲಿ[ಡಿ.19]: ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕಾಗಿ ವಿವಿಧ ಹಿಂದೂ ಪರ ಸಂಘಟನೆಗಳು ಆಗ್ರಹ ಮಾಡಿದ್ದಾಯ್ತು. ಇದೀಗ ಬಿಜೆಪಿ ಸಂಸದರೇ ಈ ಬಗ್ಗೆ ಸರ್ಕಾರವನ್ನು ನೇರವಾಗಿ ಪ್ರಶ್ನೆ ಮಾಡಿದ್ದಾರೆ.
ಮಂಗಳವಾರ ದೆಹಲಿಯಲ್ಲಿ ನಡೆದ ಬಿಜೆಪಿ ಸಂಸದೀಯ ಪಕ್ಷದ ಸಭೆಯಲ್ಲಿ ಉತ್ತರಪ್ರದೇಶದ ಹಲವು ಬಿಜೆಪಿ ಸಂಸದರು, ರಾಮಮಂದಿರ ನಿರ್ಮಾಣ ಯಾವಾಗ ಮಾಡುತ್ತೀರಿ? ಕ್ಷೇತ್ರದಲ್ಲಿ, ರಾಜ್ಯದಲ್ಲಿ ಈ ಬಗ್ಗೆ ಮತದಾರರಿಂದ ಪ್ರಶ್ನೆಗಳು ತೂರಿಬರುತ್ತಿವೆ. ಈ ಬಗ್ಗೆ ಸ್ಪಷ್ಟಉತ್ತರ ನೀಡಿ ಎಂದು ಕೋರಿದ್ದಾರೆ. ಈ ವೇಳೆ ಸಭೆಯ ಅಧ್ಯಕ್ಷತೆ ವಹಿಸಿದ್ದ ಕೇಂದ್ರ ಸಚಿವ ರಾಜ್‌ನಾಥ್‌ಸಿಂಗ್, ರಾಮಮಂದಿರ ನಿರ್ಮಾಣ ಆಗಬೇಕೆಂಬುದು ಎಲ್ಲರ ಬೇಡಿಕೆ. ಆದಕ್ಕೆ ನೀವೆಲ್ಲರೂ ತಾಳ್ಮೆಯಿಂದ ಕಾಯಬೇಕು ಎಂಬ ಸಲಹೆ ನೀಡಿದ್ದಾರೆ.
ಮಂಗಳವಾರದ ಸಭೆಯಲ್ಲಿ ಪ್ರಧಾನಿ ಮೋದಿ ಹಾಗೂ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಇಬ್ಬರೂ ಉಪಸ್ಥಿರಲಿಲ್ಲ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ