ಕೇಂದ್ರದಿಂದ ರಾಜ್ಯದ ಸಚಿವರ ಫೋನ್ ಕದ್ದಾಲಿಕೆ : ರಾಮಲಿಂಗಾರೆಡ್ಡಿ

By Suvarna Web DeskFirst Published Jan 12, 2018, 7:40 AM IST
Highlights

ರಾಜ್ಯದ ಪ್ರಮುಖ ಸಚಿವರ ದೂರವಾಣಿಯನ್ನು ಕೇಂದ್ರ ಸರ್ಕಾರ ಕದ್ದಾಲಿಸುತ್ತಿದೆ’ ಎಂದು ಗೃಹ ಸಚಿವ ರಾಮಲಿಂಗಾರೆಡ್ಡಿ ಪುನರುಚ್ಚಿಸಿದ್ದಾರೆ. ಅದಲ್ಲದೆ, ಇದರ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೇಂದ್ರ ಗೃಹ ಇಲಾಖೆಗೆ ಪತ್ರ ಬರೆಯುವುದಾಗಿಯೂ ಅವರು ತಿಳಿಸಿದ್ದಾರೆ.

ಬೆಂಗಳೂರು (ಜ.12): ರಾಜ್ಯದ ಪ್ರಮುಖ ಸಚಿವರ ದೂರವಾಣಿಯನ್ನು ಕೇಂದ್ರ ಸರ್ಕಾರ ಕದ್ದಾಲಿಸುತ್ತಿದೆ’ ಎಂದು ಗೃಹ ಸಚಿವ ರಾಮಲಿಂಗಾರೆಡ್ಡಿ ಪುನರುಚ್ಚಿಸಿದ್ದಾರೆ. ಅದಲ್ಲದೆ, ಇದರ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೇಂದ್ರ ಗೃಹ ಇಲಾಖೆಗೆ ಪತ್ರ ಬರೆಯುವುದಾಗಿಯೂ ಅವರು ತಿಳಿಸಿದ್ದಾರೆ.

ವಿಕಾಸಸೌಧದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಸಂದರ್ಭದಲ್ಲಿ ನಿರಂತರವಾಗಿ ದೂರವಾಣಿ ಕದ್ದಾಲಿಕೆ ಮಾಡಲಾಗುತ್ತಿದೆ. ಕಾನೂನು ಪ್ರಕಾರ ದೂರವಾಣಿ ಕದ್ದಾಲಿಕೆ ತಪ್ಪು, ಇದನ್ನು ಸುಪ್ರೀಂ ಕೋರ್ಟ್ ಇಲ್ಲವೇ ಹೈಕೋರ್ಟ್ ನಲ್ಲಿ ಪ್ರಶ್ನಿಸಬಹುದಾಗಿದೆ, ಕದ್ದಾಲಿಕೆ ಕುರಿತಂತೆ ಕೇಂದ್ರ ಗೃಹ ಇಲಾಖೆಗೆ ಪತ್ರ ಬರೆಯಲಾಗುವುದು’ ಎಂದು ಹೇಳಿದರು.

12 ‘ಫೋನ್ ಕದ್ದಾಲಿಸಲಾಗುತ್ತಿರುವ ವಿಷಯ ನನ್ನ ಗಮನಕ್ಕೆ ಬಂದಿದೆ. ವಿಶೇಷವಾಗಿ ರಾಜ್ಯದ ಪ್ರಮುಖ ಸಚಿವರು ಹಾಗೂ ಕಾಂಗ್ರೆಸ್ ಶಾಸಕರ ಫೋನ್ ಕದ್ದಾಲಿಕೆ ಮಾಡ ಲಾಗುತ್ತಿದೆ ಎಂದು ಹಿಂದೆಯೇ ಹೇಳಿದ್ದೆ, ಈಗಲೂ ಮುಂದುವರೆದಿದೆ. ಹಾಗಾಗಿ ಫೋನ್ ಕದ್ದಾಲಿಕೆ ಕುರಿತು ಕ್ರಮ ಕೈಗೊಳ್ಳುವಂತೆ ಕೇಂದ್ರ ಗೃಹ ಇಲಾಖೆಗೆ ಪತ್ರ ಬರೆ ಯುತ್ತೇವೆ’ ಎಂದು ಅವರು ಹೇಳಿದರು. ಆದರೆ ಯಾವ ಸಚಿವರ ದೂರವಾಣಿ ಕದ್ದಾಲಿಸಲಾಗುತ್ತಿದೆ ಎಂಬುದನ್ನು ಅವರು ಹೇಳಲಿಲ್ಲ. ಈ ಹಿಂದೆ ಬಿಜೆಪಿ ಮುಖಂಡ ಆರ್. ಆಶೋಕ ಅವರು ತಮ್ಮ ಫೋನನ್ನು ರಾಜ್ಯ ಸರ್ಕಾರ ಕದ್ದಾಲಿಸುತ್ತಿದೆ ಎಂದು ಆರೋಪಿಸಿದ್ದರು.

ಇದಕ್ಕೆ ತಿರುಗೇಟು ನೀಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವರಾದ ಎಂ.ಬಿ. ಪಾಟೀಲ ಹಾಗೂ ರಾಮಲಿಂಗಾರೆಡ್ಡಿ ಅವರು, ‘ಕೇಂದ್ರ ಸರ್ಕಾರವೇ ನಮ್ಮ ಫೋನ್ ಕದ್ದಾಲಿಸುತ್ತಿದೆ’ ಎಂದು ತಿರುಗೇಟು ನೀಡಿದ್ದರು.

click me!