
ಚನ್ನಪಟ್ಟಣ : ರಾಮನಗರ ಉಪಚುನಾವಣೆಗೆ ಜೆಡಿಎಸ್‌ನಿಂದ ಸ್ಪರ್ಧಿಸಲು ನಾನು ಇಚ್ಛಿಸಿದ್ದೇನೆ. ಆದರೆ, ಅಂತಿಮ ತೀರ್ಮಾನವನ್ನು ನಮ್ಮ ಪಕ್ಷದ ವರಿಷ್ಠರು ಕೈಗೊಳ್ಳುತ್ತಾರೆ. ಅವರ ತೀರ್ಮಾನಕ್ಕೆ ನಾನು ಬದ್ಧ ಎಂದು ಮಾಜಿ ಶಾಸಕಿ ಅನಿತಾ ಕುಮಾರಸ್ವಾಮಿ ಹೇಳಿದ್ದಾರೆ.
ಇಲ್ಲಿನ ತಾಪಂ ಕಚೇರಿ ಆವರಣದಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಕಚೇರಿ ಉದ್ಘಾಟನೆ ಸಮಾರಂಭದಲ್ಲಿ ಪಾಲ್ಗೊಂಡಿದ್ದ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಪಕ್ಷದ ಕಾರ್ಯಕರ್ತರು ಮತ್ತು ಮುಖಂಡರು ಸ್ಪರ್ಧಿಸುವಂತೆ ಒತ್ತಾಯ ಮಾಡುತ್ತಿದ್ದಾರೆ. ಚುನಾವಣೆ ನಿಗದಿಯಾದ ಬಳಿಕ ಮಾಜಿ ಪ್ರಧಾನಿಗಳಾದ ದೇವೇಗೌಡರು ಮತ್ತು ಮುಖ್ಯಮಂತ್ರಿ ಕುಮಾರಸ್ವಾಮಿ ಸೂಕ್ತ ನಿರ್ಧಾರ ತೆಗೆದು ಕೊಳ್ಳಲಿದ್ದಾರೆ ಎಂದರು.
ನಿಗದಿತ ದಿನಾಂಕದಂತೆ ಕುಮಾರಸ್ವಾಮಿ ಅವರು ಬಜೆಟ್ ಮಂಡಿಸಲಿದ್ದು, ಬಜೆಟ್ ಮೂಲಕ ಚುನಾವಣೆಯ ಸಮಯದಲ್ಲಿ ಪಕ್ಷ ನೀಡಿದ್ದ ಭರವಸೆಯನ್ನು ಈಡೇರಿಸಲಿದ್ದಾರೆ. ಬಜೆಟ್ ತಯಾರಿಯಲ್ಲಿ ಕುಮಾರಸ್ವಾಮಿ ನಿರತರಾಗಿದ್ದು, ಬಜೆಟ್ ಮುಗಿದ ಬಳಿಕ ಕ್ಷೇತ್ರಕ್ಕೆ ಭೇಟಿ ನೀಡಲಿದ್ದಾರೆ ಎಂದು ತಿಳಿಸಿದರು.
ಸಾಲಮನ್ನಾ ಖಚಿತ: ಚುನಾವಣೆ ಸಮಯದಲ್ಲಿ ಮತದಾರರಿಗೆ ಕೊಟ್ಟಮಾತಿನಂತೆ ಕುಮಾರಸ್ವಾಮಿ ಸಾಲ ಮನ್ನಾ ಮಾಡಲಿದ್ದಾರೆ. ಇದರಲ್ಲಿ ಯಾವುದೇ ಅನುಮಾನ ಬೇಡ ಎಂದು ಸ್ಪಷ್ಟಪಡಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.