ಸೂಲಿಬೆಲೆ ಬಗ್ಗೆ ಕೆಟ್ಟ ಭಾಷೆ ಬಳಸಿಲ್ಲ, ತನಿಖೆಗೆ ಸಿದ್ಧ : ರೈ

Published : Sep 28, 2017, 02:16 PM ISTUpdated : Apr 11, 2018, 12:36 PM IST
ಸೂಲಿಬೆಲೆ ಬಗ್ಗೆ ಕೆಟ್ಟ ಭಾಷೆ ಬಳಸಿಲ್ಲ, ತನಿಖೆಗೆ ಸಿದ್ಧ : ರೈ

ಸಾರಾಂಶ

ಯುವ ಬ್ರಿಗೇಡ್ ಮುಖ್ಯಸ್ಥ ಚಕ್ರವರ್ತಿ ಸೂಲಿಬೆಲೆ ಬಗ್ಗೆ ಕೆಟ್ಟ ಭಾಷೆ ಬಳಸಿಲ್ಲ ಎಂದು ಸಮರ್ಥಿಸಿಕೊಂಡಿರುವ ಅರಣ್ಯ ಸಚಿವ ರಮಾನಾಥ ರೈ, ಸೂಲಿಬೆಲೆ ಬಗ್ಗೆ ಅವಹೇಳನಕಾರಿ ಭಾಷೆ ಬಳಸಿದ್ದರೆ ತನಿಖೆಗೆ ಸಿದ್ಧ ಎಂದು ಹೇಳಿದ್ದಾರೆ.

ಗದಗ: ಯುವ ಬ್ರಿಗೇಡ್ ಮುಖ್ಯಸ್ಥ ಚಕ್ರವರ್ತಿ ಸೂಲಿಬೆಲೆ ಬಗ್ಗೆ ಕೆಟ್ಟ ಭಾಷೆ ಬಳಸಿಲ್ಲ ಎಂದು ಸಮರ್ಥಿಸಿಕೊಂಡಿರುವ ಅರಣ್ಯ ಸಚಿವ ರಮಾನಾಥ ರೈ, ಸೂಲಿಬೆಲೆ ಬಗ್ಗೆ ಅವಹೇಳನಕಾರಿ ಭಾಷೆ ಬಳಸಿದ್ದರೆ ತನಿಖೆಗೆ ಸಿದ್ಧ ಎಂದು ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಕೆಟ್ಟ ಭಾಷೆಯಲ್ಲಿ ಮಾತನಾಡದಿದ್ದರೂ ಬಿಜೆಪಿಯವರು ಅನಗತ್ಯ ಗೊಂದಲ ಸೃಷ್ಟಿಸಿದ್ದಾರೆ. ಬಿಜೆಪಿಯವರು  ಪ್ರಚಾರಕ್ಕಾಗಿ ಹೀಗೆಲ್ಲ ಸೃಷ್ಟಿ ಮಾಡುತ್ತಿದ್ದಾರೆ’ ಎಂದರು.

ಕಳೆದ ಸೆ.22ರಂದು ದಕ್ಷಿಣ ಕನ್ನಡ ಜಿಲ್ಲೆಯ ಅಸೈಗೋಳದಲ್ಲಿ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ತುಳು ಭಾಷೆಯಲ್ಲಿ ಭಾಷಣ ಮಾಡುತ್ತಿರುವ ಸಂದರ್ಭದಲ್ಲಿ ಸಚಿವರು, ಸೂಲಿಬೆಲೆ ಬಗ್ಗೆ ವ್ಯಂಗ್ಯವಾಡಿದ್ದರು. ಆ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸಚಿವರು ಈ ರೀತಿಯ ಪದ ಬಳಕೆಗೆ ತೀವ್ರ ಆಕ್ಷೇಪ ವ್ಯಕ್ತವಾಗಿತ್ತು.

ಈ ಕುರಿತು ಬಿಜೆಪಿ ಅಲ್ಪಸಂಖ್ಯಾತ ವಿಭಾಗದ ಮುಖಂಡ ರಹೀಂ ಉಚ್ಚಿಲ್  ನ್ಯಾಯಾಲಯಕ್ಕೆ ದೂರು ನೀಡಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಗೃಹಲಕ್ಷ್ಮಿ ಫಲಾನುಭವಿಗಳಿಗೆ ಗುಡ್ ನ್ಯೂಸ್ ಕೊಟ್ಟ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್! ಖಾತೆಗೆ ಯಾವಾಗ ಬರುತ್ತೆ ಹಣ? ಇಲ್ಲಿದೆ ವಿವರ
ಪ್ರೀತಿ ವಿರೋಧಿಸಿದ ತಂದೆಯನ್ನು ಗೆಳೆಯನ ಜೊತೆ ಸೇರಿ ಮಸಣಕ್ಕೆ ಅಟ್ಟಿದ ಪಾಪಿ ಮಗಳು