ರಮೇಶ್ ಜಾರಕಿಹೊಳಿ ಔಟ್ ..? ಮುಂದಿನ ನಡೆ ಏನು..?

By Web DeskFirst Published Dec 22, 2018, 12:17 PM IST
Highlights

ರಾಜ್ಯದಲ್ಲಿ ಸಚಿವ ಸಂಪುಟ ವಿಸ್ತರಣೆ ಚರ್ಚೆ ಜೋರಾಗಿದೆ. ಇದೇ ವೇಳೆ ಅತೃಪ್ತರ ಸಂಖ್ಯೆಯೂ ಕೂಡ  ಹೆಚ್ಚಾಗುತ್ತಿದೆ. ಇದರಿಂದ ಕಾಂಗ್ರೆಸ್ ನಲ್ಲಿ ಅಸಮಾಧಾನ ಭುಗಿಲೆದ್ದಿದೆ ಎಂದು ಬಿಜೆಪಿ ಮುಖಂಡ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. 

ಹುಬ್ಬಳ್ಳಿ: ರಾಜ್ಯದಲ್ಲಿ ಸಚಿವ ಸಂಪುಟ ವಿಸ್ತರಣೆ ಚರ್ಚೆ ಜೋರಾಗಿರುವ ಬೆನ್ನಲ್ಲೇ ಕಾಂಗ್ರೆಸ್  ಮುಖಂಡರಲ್ಲಿ ಅತೃಪ್ತಿ ತಾಂಡವವಾಡುತ್ತಿದೆ ಎಂದು ಬಿಜೆಪಿ ಮುಖಂಡ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. 

ಸಂಪುಟ ವಿಸ್ತರಣೆ ಮಾಡುವುದಾಗಿ ಮೂರು ತಿಂಗಳು ಕಾಲಹರಣ ಮಾಡಿದ್ದಾರೆ. ಸಂಪುಟ ವಿಸ್ತರಣೆ ನಂತರ ಈಗ ಅಸಮಾಧಾನ ಭುಗಿಲೇಳಲಿದೆ.

ಸಂಪುಟದಿಂದ ಸಚಿವ ರಮೇಶ್ ಜಾರಕಿಹೋಳಿ ಅವರನ್ನು ಕೈಬಿಟ್ಟಿದ್ದು ಸಾಕಷ್ಟು ಪರಿಣಾಮ ಬೀರಲಿದೆ. ಸಂಪುಟ ವಿಸ್ತರಣೆ ದಿನವಾದ ಶನಿವಾರ ಸಂಜೆವರೆಗೆ ರಾಜಕೀಯದಲ್ಲಿ ಸಾಕಷ್ಟು ಬದಲಾವಣೆ ಆಗಲಿದೆ ಎಂದು ಹೇಳಿದ್ದಾರೆ. 

ನಾವು 104 ಜನ ವಿರೋಧ ಪಕ್ಷದಲ್ಲಿದ್ದು ಕೆಲಸ ಮಾಡುತ್ತಿದ್ದೇವೆ‌. ಅಸಮಾಧಾನ ಭುಗಿಲೆದ್ದ ಮೇಲೆ ಬಿಜೆಪಿ ಶಾಸಕಾಂಗ ಸಭೆ ಕರೆಯುತ್ತೇನೆ. ಸಭೆಯಲ್ಲಿ ಮುಂದಿನ ನಡೆಯ ಬಗ್ಗೆ ತೀರ್ಮಾನ ಕೈಗೊಳ್ಳುತ್ತೇವೆ ಎಂದು ಯಡಿಯೂರಪ್ಪ ಹೇಳಿದರು. 

ಬಿಜೆಪಿ ಡಿನ್ನರ್‌ಗೆ ರಮೇಶ್‌ ಜಾರಕಿಹೊಳಿ!

 

ರಾಜ್ಯದಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ ರೈತರಿಗೆ ಟೋಪಿ ಹಾಕುತ್ತಾ ಬಂದಿದ್ದಾರೆ ಎಂದು ಅಸಮಾಧಾನ ಹೊರಹಾಕಿದ ಯಡಿಯೂರಪ್ಪ ಬೆಳಗಾವಿ ಅಧಿವೇಶನದಲ್ಲೇ  ಸರ್ಕಾರದ ದೋಷ ಎತ್ತಿ ತೋರಿಸುತ್ತಾ ಬಂದಿದ್ದೇವೆ. ಜ್ವಲಂತ ಸಮಸ್ಯೆಗಳ ಬಗ್ಗೆಯೂ ಕೂಡ ಚರ್ಚಿಸಿದ್ದೇವೆ ಎಂದು ಹೇಳಿದ್ದಾರೆ. 

click me!