
ಬೆಂಗಳೂರು : ಪಕ್ಷದಲ್ಲಿ ರಮೇಶ್ ಜಾರಕಿಹೊಳಿ ಕಟ್ಟಿಹಾಕಲು ರಣತಂತ್ರ ಸಿದ್ಧವಾಗಿದೆ ಎನ್ನಲಾಗುತ್ತಿದ್ದು, ಇದರ ಬೆನ್ನಲ್ಲೇ ನಾನು ಏಲ್ಲಿ ಬೇಕಾದರು ರಾಜಕೀಯ ಮಾಡಬಹುದು ಎಂದು ಡಿ.ಕೆ ಶಿವಕುಮಾರ್ ತಿರುಗೇಟು ನೀಡಿದ್ದಾರೆ. ರಮೇಶ್ ವಿರುದ್ಧ ಕಾಂಗ್ರೆಸ್ ಹೈಕಮಾಂಡ್ ಮಾಸ್ಟರ್ ಪ್ಲಾನ್ ಮಾಡುತ್ತಿದ್ದು, ರಮೇಶ್ ಜಾರಕಿಹೊಳಿ ಅವರನ್ನು ಸಚಿವ ಸ್ಥಾನದಿಂದ ಕೆಳಗಿಳಿಸಲು ಚರ್ಚೆ ನಡೆದಿದೆ ಎನ್ನಲಾಗಿದೆ.
ಬೆಳಗಾವಿ ಲೋಕಸಭೆಗೆ ರಮೇಶ್ ಜಾರಕಿಹೊಳಿ ಕಣಕ್ಕಿಳಿಸುವ ಬಗ್ಗೆ ವೇಣುಗೋಪಾಲ್ ಗೆ ರಾಹುಲ್ ಸೂಚನೆ ನೀಡಿದ್ದಾರೆ ಎನ್ನಲಾಗಿದ್ದು, ರಮೇಶ್ ಬದಲು ಸತೀಶ್ ಜಾರಕಿಹೊಳಿಗೆ ಸಚಿವ ಸ್ಥಾನ ನೀಡುವ ಬಗ್ಗೆಯೂ ಚರ್ಚೆ ನಡೆದಿದೆ. ಡೈವೈಡ್ ಅಂಡ್ ರೂಲ್ ಮೂಲಕ ಜಾರಕಿಹೊಳಿ ಬ್ರದರ್ಸ್ ಕಟ್ಟಿಹಾಕಲು ರಣತಂತ್ರ ರೂಪಿಸಲಾಗುತ್ತಿದೆ.
ರಮೇಶ್ ಜಾರಕಿಹೊಳಿ ಜೊತೆ ಚರ್ಚಿಸಿ ಲೋಕಸಭೆ ಸ್ಪರ್ಧೆಗೆ ಒಪ್ಪಿಸುವಂತೆ ಸಿದ್ದರಾಮಯ್ಯಗೆ ಕೆ.ಸಿ ವೇಣುಗೋಪಾಲ್ ಹೊಣೆ ನೀಡಿದ್ದು, ಸೋಮವಾರ ರಮೇಶ್ ಜಾರಕಿಹೊಳಿ ಜೊತೆ ಸಿದ್ದರಾಮಯ್ಯ ಚರ್ಚಿಸುವ ಸಾಧ್ಯತೆ ಇದೆ.
ಬೆಳಗಾವಿ ಕೈ ಪಾಳೆಯದಲ್ಲಿ ಮತ್ತೆ ಗೊಂದಲ ಎದುರಾಗಿದ್ದು, ಸಚಿವ ಸ್ಥಾನದಿಂದ ಕೆಳಗಿಳಿಸಿದರೆ ರಮೇಶ್ ಜಾರಕಿಹೊಳಿ ಮೈತ್ರಿ ಸರ್ಕಾರವನ್ನು ಉಳಿಸುತ್ತಾರಾ ಎನ್ನುವ ಪ್ರಶ್ನೆ ಮೂಡಿದ್ದು, ಈ ನಿಟ್ಟಿನಲ್ಲಿ ರಮೇಶ್ ಜಾರಕಿಹೊಳಿ ಜೊತೆ ಇರುವ ಶಾಸಕರನ್ನೂ ಹತೋಟಿಗೆ ತೆಗೆದುಕೊಳ್ಳಲು ಸಿದ್ದರಾಮಯ್ಯಗೆ ವೇಣುಗೋಪಾಲ್ ಸೂಚನೆ ನೀಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.