ಬಿಜೆಪಿ ಭರ್ಜರಿ ಗೆಲುವಿನ ಬೆನ್ನಲ್ಲೇ ಕೈ ನಾಯಕ ಬಿಜೆಪಿಗೆ

Published : May 24, 2019, 11:27 AM IST
ಬಿಜೆಪಿ ಭರ್ಜರಿ ಗೆಲುವಿನ ಬೆನ್ನಲ್ಲೇ ಕೈ ನಾಯಕ ಬಿಜೆಪಿಗೆ

ಸಾರಾಂಶ

ಲೋಕಸಭಾ ಚುನಾವಣೆ ಮುಕ್ತಾಯವಾಗಿದ್ದು ರಾಜ್ಯದಲ್ಲಿ ಬಿಜೆಪಿ ಭರ್ಜರಿ ಜಯಗಳಿಸಿದ ಬೆನ್ನಲ್ಲೇ ಕೈ ನಾಯಕ ಬಿಜೆಪಿ ಸೇರುವುದು ಪಕ್ಕಾ ಆಗಿದೆ. 

ಬೆಳಗಾವಿ :  ಲೋಕಸಭಾ ಚುನಾವಣೆ ಫಲಿತಾಂಶ ಪ್ರಕಟವಾಗಿದ್ದು, ರಾಜ್ಯದಲ್ಲಿ ಬಿಜೆಪಿ ಬರೋಬ್ಬರಿ 25 ಸ್ಥಾನಗಳಲ್ಲಿ ಜಯಗಳಿಸಿದೆ. ಇದೇ ಬೆನ್ನಲ್ಲೇ ಕೈ ಅತೃಪ್ತ ಮುಖಂಡ ರಮೇಶ್ ಜಾರಕಿಹೊಳಿ ಬಿಜೆಪಿ ಸೇರುವುದು ಪಕ್ಕಾ ಆಗಿದೆ. 

ಈ ಬಗ್ಗೆ ಬೆಳಗಾವಿಯಲ್ಲಿ ಬಿಜೆಪಿ ಸಂಸದ ಸುರೇಶ ಅಂಗಡಿ ಮಾಹಿತಿ ನೀಡಿದ್ದು, ರಮೇಶ್ ಬಿಜೆಪಿ ಬರುತ್ತಿದ್ದಾರೆ. ಗೋಕಾಕ್ ಕ್ಷೇತ್ರದಲ್ಲಿ ಬಿಜೆಪಿಗೆ ಹೆಚ್ಚಿನ ಲೀಡ್ ಸಿಕ್ಕಿದೆ. ಈ ನಿಟ್ಟಿನಲ್ಲಿ ರಮೇಶ್ ಜಾರಕಿಹೊಳಿಗೆ ಅಭಿನಂದನೆ ಸಲ್ಲಿಸುತ್ತೇನೆ.  ರಮೇಶ್ ನಿಷ್ಠಾವಂತ ಕಾರ್ಯರ್ತ ಎಂದು ಹೊಗಳಿದ್ದಾರೆ. 

ರಮೇಶ ಜಾರಕಿಹೊಳಿಯನ್ನು ನಿರ್ಲಕ್ಷ್ಯ ಮಾಡಿದ್ದು, ಸ್ವಾಭಿಮಾನಕ್ಕೆ ಧಕ್ಕೆ ಬಂದಲ್ಲಿ ಏನು ಮಾಡುತ್ತಾರೆ.  ಆದ್ದರಿಂದ ನಮ್ಮ ನಾಯಕರ ಮೇಲೆ ಇದೀಗ ಭರವಸೆ ಇಟ್ಟಿ ಬಿಜೆಪಿ ಬರುತ್ತಿದ್ದು, ಅವರ ಆಗಮನವನ್ನು ಸ್ವಾಗತಿಸುವುದಾಗಿ ಹೇಳಿದ್ದಾರೆ.  ಜಾರಕಿಹೊಳಿ ಜೊತೆಗೆ ಕೆಲ ಶಾಸಕರೂ ಕೂಡ ಬಿಜೆಪಿಗೆ ಸೇರುತ್ತಿದ್ದು,  ಜಿಲ್ಲೆಯ ಕೈ ಶಾಸಕರೆಲ್ಲರೂ ತೊರೆದು ಬರಲಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

Sringeri Assembly seat recount: ರಾಜೇಗೌಡ ಸೋಲು, ಶೃಂಗೇರಿ ಕ್ಷೇತ್ರಕ್ಕೀಗ ಜೀವರಾಜ್‌ ಶಾಸಕ!
ದಾವಣಗೆರೆ ಬಾಗಲಕೋಟೆ ಉಪಚುನಾವಣ ಫಲಿತಾಂಶದ ನಡುವೆಯೇ ಮಹತ್ವದ ಬೆಳವಣಿಗೆ; ಮುಂದಿನ ಸಿಎಂ ಖರ್ಗೆ? ರಾಯರಡ್ಡಿ ಹೇಳಿದ್ದೇನು?