ಅಗಲಿದ ಆತ್ಮೀಯ ಗೆಳೆಯನಿಗೆ ಹೆಗಲು ಕೊಟ್ಟ ರಮೇಶ್ ಕುಮಾರ್, ಸಿದ್ದರಾಮಯ್ಯ

Published : Jul 29, 2019, 03:53 PM ISTUpdated : Jul 29, 2019, 08:44 PM IST
ಅಗಲಿದ ಆತ್ಮೀಯ ಗೆಳೆಯನಿಗೆ ಹೆಗಲು ಕೊಟ್ಟ ರಮೇಶ್ ಕುಮಾರ್, ಸಿದ್ದರಾಮಯ್ಯ

ಸಾರಾಂಶ

ಭಾನುವಾರ ನಿಧನರಾಗಿದ್ದ ಕಾಂಗ್ರೆಸ್ ನಾಯಕ, ಮಾಜಿ ಸಚಿವ ಜೈಪಾಲ್ ರೆಡ್ಡಿ ಶವಯಾತ್ರೆಯಲ್ಲಿ ಭಾಗವಹಿಸಿದ ನಿರ್ಗಮಿತ ಸ್ಪೀಕರ್ ರಮೇಶ್ ಕುಮಾರ್, ಸಿದ್ದರಾಮಯ್ಯ

ಹೈದರಾಬಾದ್ (ಜು.29): ಭಾನುವಾರ ನಿಧನರಾದ ಮಾಜಿ ಕೇಂದ್ರ ಸಚಿವ, ಕಾಂಗ್ರೆಸ್ ನಾಯಕ ಜೈಪಾಲ್ ರೆಡ್ಡಿ ಶವಯಾತ್ರೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ನಿರ್ಗಮಿತ ಸ್ಪೀಕರ್ ರಮೇಶ್ ಕುಮಾರ್ ಭಾಗವಹಿಸಿದರು.

"

ಶವಯಾತ್ರೆಯಲ್ಲಿ ಅಗಲಿದ ತಮ್ಮ ಗೆಳೆಯನಿಗೆ ಅವರಿಬ್ಬರು ಹೆಗಲು ಕೊಟ್ಟದ್ದು ವಿಶೇಷವಾಗಿತ್ತು. ರಮೇಶ್ ಕುಮಾರ್ ಮತ್ತು ಜೈಪಾಲ್ ರೆಡ್ಡಿ  ಆತ್ಮೀಯ ಸ್ನೇಹಿತರಾಗಿದ್ದವರು.

4 ಬಾರಿ ಶಾಸಕ, 5 ಬಾರಿ ಸಂಸದ ಹಾಗೂ 2 ಬಾರಿ ರಾಜ್ಯಸಭಾ ಸದಸ್ಯರಾಗಿ ಸುದೀರ್ಘ ರಾಜಕೀಯ ಅನುಭವ ಹೊಂದಿದ್ದ ಜೈಪಾಲ್ ರೆಡ್ಡಿ ಕಾಂಗ್ರೆಸ್‌ನ ಪ್ರಮುಖ ನಾಯಕರಾಗಿ ಗುರುತಿಸಿಕೊಂಡವರು.

ಹೈದರಾಬಾದ್‌ನ ಜ್ಯುಬಿಲಿ ಹಿಲ್ಸ್ ನಿವಾಸದಿಂದ ಆರಂಭವಾದ ಜೈಪಾಲ್ ರೆಡ್ಡಿ ಶವಯಾತ್ರೆ ಪಿ.ವಿ. ಘಾಟ್‌ವರೆಗೆ ಸಾಗಿತು. ಅಲ್ಲಿ ಅಂತಿಮ ವಿಧಿ-ವಿಧಾನಗಳನ್ನು ನೆರವೇರಿಸಲಾಯಿತು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಡಿಕೆ ಶಿವಕುಮಾರ್‌ಗೆ ಕೇಂದ್ರ ನಾಯಕತ್ವ ಸ್ಥಾನ : ಕಾಂಗ್ರೆಸ್‌ನಲ್ಲಿ ಕೂಗು
ನಾಯಕತ್ವ ಬದಲಾವಣೆ ಹೇಳಿಕೆ ಒಂದು ತಿಂಗಳ ಮೌನವ್ರತ : ಪಿ.ರವಿಕುಮಾರ್