ಬಿಜೆಪಿ ಶೀತಲ ಸಮರ; ರಾಮಲಾಲ್‌ ಎಚ್ಚರಿಕೆ

Published : Oct 05, 2016, 09:41 AM ISTUpdated : Apr 11, 2018, 12:39 PM IST
ಬಿಜೆಪಿ ಶೀತಲ ಸಮರ; ರಾಮಲಾಲ್‌ ಎಚ್ಚರಿಕೆ

ಸಾರಾಂಶ

ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ಉಂಟಾಗಿರುವ ಶೀತಲ ಸಮರದ ಕುರಿತಂತೆ ಪಕ್ಷದ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ರಾಮ್‌'ಲಾಲ್‌ ಬೆಳಗಾವಿಯಲ್ಲಿ ನಡೆಯುತ್ತಿರುವ ರಾಜ್ಯ ಬಿಜೆಪಿ ಕಾರ್ಯಕಾರಿಣಿಯಲ್ಲಿ ಪ್ರಸ್ತಾಪಿಸಿದ್ದು, ಪಕ್ಷದ ಅಧ್ಯಕ್ಷರ ವಿರುದ್ಧ ಬಹಿರಂಗ ವೇದಿಕೆಗಳಲ್ಲಿ ಯಾರೂ ಟೀಕಿಸಕೂಡದು ಎಂದು ಪರೋಕ್ಷ ಎಚ್ಚರಿಕೆ ನೀಡಿದ್ದಾರೆ.

ಎರಡು ದಿನಗಳ ಕಾರ್ಯಕಾರಿಣಿಯ ಸಮಾರೋಪದಲ್ಲಿ ಮಂಗಳವಾರ ಮಾತನಾಡಿದ ಅವರು, ‘‘ಪಕ್ಷದ ಅಧ್ಯಕ್ಷರ ವಿರುದ್ಧ ಪಕ್ಷದ ಮುಖಂಡರೇ ಬಹಿರಂಗವಾಗಿ ಮಾತನಾಡಿದರೆ, ಪಕ್ಷವನ್ನು ಮುನ್ನಡೆಸುವುದು ಅಧ್ಯಕ್ಷರಿಗೆ ಹೊರೆಯಾಗುತ್ತದೆ. ಸಾಮಾನ್ಯ ಕಾರ್ಯಕರ್ತರಿಗೆ, ಜನರಿಗೆ ಮುಖ ತೋರಿಸುವುದು ಕಷ್ಟವಾಗುತ್ತದೆ’’ ಎಂದು ಹೇಳಿದರು.

‘‘ಪಕ್ಷದ ಆಂತರಿಕ ವಿಚಾರಗಳನ್ನು ಬಹಿರಂಗವಾಗಿ ಯಾರೂ ಕೂಡ ಮಾತನಾಡಕೂಡದು. ಪಕ್ಷದಲ್ಲಿನ ಪದಾಧಿಕಾರಿಗಳ ನೇಮಕಾತಿ ಸೇರಿದಂತೆ ಯಾವುದೇ ವಿಚಾರವನ್ನು ಪಕ್ಷದ ವೇದಿಕೆಯಲ್ಲೇ ಚರ್ಚಿಸಬೇಕು. ಇಂತಹ ವಿಚಾರಗಳನ್ನು ಬಹಿರಂಗವಾಗಿ ಮಾತನಾಡುವುದನ್ನು ಅಶಿಸ್ತು ಎಂದೇ ಹೇಳಬೇಕಾಗುತ್ತದೆ’’ ಎಂದು ಖಡಕ್‌ ಸಂದೇಶ ನೀಡಿದರು.

‘‘ನಿಮಗೆ ಪಕ್ಷದ ಮುಂದಿನ ಮುಖ್ಯಮಂತ್ರಿ ಅಭ್ಯರ್ಥಿ ಯಾರು ಎಂದು ಹೇಳಬೇಕೆ?’’ ಎಂದು ರಾಮ್‌ಲಾಲ್‌ ಪ್ರತಿನಿಧಿಗಳನ್ನು ಉದ್ದೇಶಿಸಿ ಕೇಳಿದಾಗ, ಪ್ರತಿನಿಧಿಗಳೆಲ್ಲರೂ ಯಡಿಯೂರಪ್ಪ ಅವರ ಹೆಸರು ಉಚ್ಚರಿಸಿದರು. ಆಗ ರಾಮ್‌ಲಾಲ್‌, ‘‘ಪಕ್ಷದ ರಾಷ್ಟ್ರೀಯ ನಾಯಕರೂ ಇದನ್ನೇ ಬಯಸುತ್ತಾರೆ’’ ಎಂದು ಸೂಚ್ಯವಾಗಿ ಹೇಳಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಡಿಜಿಪಿಯಾಗಿ ಅಲೋಕ್‌ ಕುಮಾರ್ ಮುಂಬಡ್ತಿ, ಸರ್ಕಾರದ ವಿರುದ್ಧ 8 ತಿಂಗಳ ಕಾನೂನು ಹೋರಾಟಕ್ಕೆ ಜಯ!
ರಾಮನಗರ: ರಸ್ತೆಗೆ ಕುರಿಗಳು ಅಡ್ಡಿ, ಹಾರ್ನ್ ಮಾಡಿದ್ದಕ್ಕೆ ಬಸ್ ಚಾಲಕನ ಮೇಲೆ ಗ್ರಾಮಸ್ಥರಿಂದ ಹಲ್ಲೆ!