ರಾಮನಗರ ಅಭ್ಯರ್ಥಿಗಳ ಮತ ಅವರಿಗೇ ಇಲ್ಲ!

By Web DeskFirst Published Oct 26, 2018, 10:46 AM IST
Highlights

ರಾಮನಗರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಜೆಡಿಎಸ್ - ಕಾಂಗ್ರೆಸ್ ಮೈತ್ರಿ ಅಭ್ಯರ್ಥಿ ಹಾಗೂ ಬಿಜೆಪಿ ಅಭ್ಯರ್ಥಿಗೆ ಕ್ಷೇತ್ರದಲ್ಲಿ ಮತದಾನದ ಹಕ್ಕೇ ಇಲ್ಲ ! 

ರಾಮನಗರ (ಅ. 26): ರಾಮನಗರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಅಭ್ಯರ್ಥಿ ಹಾಗೂ ಬಿಜೆಪಿ ಅಭ್ಯರ್ಥಿಗೆ ಕ್ಷೇತ್ರದಲ್ಲಿ ಮತದಾನದ ಹಕ್ಕೇ ಇಲ್ಲ. ಈ ಉಪ ಚುನಾವಣೆಯಲ್ಲಿ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಅಭ್ಯರ್ಥಿಯಾಗಿರುವ ಅನಿತಾ ಕುಮಾರಸ್ವಾಮಿ ಹಾಗೂ ಬಿಜೆಪಿ ಅಭ್ಯರ್ಥಿ ಎಲ್. ಚಂದ್ರಶೇಖರ್ ಅವರು ಸ್ಪರ್ಧೆ ಮಾಡಿರುವ ಕ್ಷೇತ್ರದಲ್ಲಿ ತಾವೇ ಮತದಾನ ಮಾಡುವ ಅವಕಾಶದಿಂದ ವಂಚಿತರಾಗಿದ್ದಾರೆ.

ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಮತ್ತು ಪತ್ನಿ ಅನಿತಾ ಕುಮಾರಸ್ವಾಮಿ ಹೆಸರು ಮಾಗಡಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಬಿಡದಿ ಪುರಸಭೆಯ ಕೇತಗಾನಹಳ್ಳಿಯ ಮತದಾರರ ಪಟ್ಟಿಯಲ್ಲಿದೆ. ಇನ್ನು ಬಿಜೆಪಿ ಅಭ್ಯರ್ಥಿ ಎಲ್.ಚಂದ್ರಶೇಖರ್ ಹೆಸರು ಸಹ ಬಿಡದಿ ಪುರಸಭೆ ವ್ಯಾಪ್ತಿಯ ಇಟ್ಟುಮಡು ಗ್ರಾಮದ ಮತದಾರರ ಪಟ್ಟಿಯಲ್ಲಿ ಸೇರಿದೆ.

ಪಕ್ಷೇತರರಾಗಿ ಸ್ಪರ್ಧಿಸಿರುವ ಕುಮಾರನಾಯ್ಕ ಮತ್ತು ಸುರೇಂದ್ರ ಮಾತ್ರ ರಾಮನಗರ ಕ್ಷೇತ್ರದಲ್ಲಿ ಮತದಾನದ ಹಕ್ಕು ಹೊಂದಿದ್ದಾರೆ. ಉಳಿದಂತೆ ಪೂರ್ವಾಂಚಲ ಮಹಾಪಂಚಾಯತ್ ಪಾರ್ಟಿಯ ಅಭ್ಯರ್ಥಿಯಾಗಿರುವ ಎಚ್.ಡಿ.ರೇವಣ್ಣ ಅವರು ಚಿಕ್ಕಮಗಳೂರು, ಪಕ್ಷೇತರ ಅಭ್ಯರ್ಥಿಗಳಾದ ಡಿ.ಎಂ.ಮಾದೇಗೌಡ ಮಾಗಡಿಯಲ್ಲಿ, ಮುನಿಯಾಬೋವಿ ಹೆಸರು ಚಿಕ್ಕಮಗಳೂರಿನ ಮತದಾರರ ಪಟ್ಟಿಯಲ್ಲಿದೆ. 

click me!