ರಾಷ್ಟ್ರಪತಿಯಾಗಿ ರಾಮನಾಥ್ ಕೋವಿಂದ್ ಪದಗ್ರಹಣ

Published : Jul 25, 2017, 11:31 AM ISTUpdated : Apr 11, 2018, 12:47 PM IST
ರಾಷ್ಟ್ರಪತಿಯಾಗಿ ರಾಮನಾಥ್ ಕೋವಿಂದ್ ಪದಗ್ರಹಣ

ಸಾರಾಂಶ

ಭಾರತದ 14ನೇ ರಾಷ್ಟ್ರಪತಿಯಾಗಿ ರಾಮನಾಥ್ ಕೋವಿಂದ್ ಇಂದು ಪ್ರಮಾಣ ವಚನ ಸ್ವೀಕರಿಸಿದರು. ಸಂಸತ್​ ಭವನದ ಸೆಂಟ್ರಲ್​​​​​​ಹಾಲ್​ನಲ್ಲಿ ನಡೆದ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮದಲ್ಲಿ,  ಸುಪ್ರೀಂಕೋರ್ಟ್ ಮುಖ್ಯ ನ್ಯಾಯಾಧೀಶ ಜೆ.ಎಸ್. ಖೆಹರ್, ಕೋವಿಂದ್ ಅವರಿಗೆ ಪ್ರತಿಜ್ಞಾವಿಧಿ ಬೋಧಿಸಿದರು.

ನವದೆಹಲಿ: ಭಾರತದ 14ನೇ ರಾಷ್ಟ್ರಪತಿಯಾಗಿ ರಾಮನಾಥ್ ಕೋವಿಂದ್ ಇಂದು ಪ್ರಮಾಣ ವಚನ ಸ್ವೀಕರಿಸಿದರು.

ಸಂಸತ್​ ಭವನದ ಸೆಂಟ್ರಲ್​​​​​​ಹಾಲ್​ನಲ್ಲಿ ನಡೆದ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮದಲ್ಲಿ,  ಸುಪ್ರೀಂಕೋರ್ಟ್ ಮುಖ್ಯ ನ್ಯಾಯಾಧೀಶ ಜೆ.ಎಸ್. ಖೆಹರ್, ಕೋವಿಂದ್ ಅವರಿಗೆ ಪ್ರತಿಜ್ಞಾವಿಧಿ ಬೋಧಿಸಿದರು. ದೇವರ ಹೆಸರಿನಲ್ಲಿ ಕೋವಿಂದ್ ಪ್ರಮಾಣ ಸ್ವಿಕರಿಸಿದರು.

ಈ ಸಮಾರಂಭದಲ್ಲಿ ಉಪರಾಷ್ಟ್ರಪತಿ ಹಾಮೀದ್ ಅನ್ಸಾರಿ, ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಚಿವರು, ಹಲವು ರಾಜ್ಯಗಳ ಮುಖ್ಯಮಂತ್ರಿಗಳು, ವಿವಿಧ ದೇಶದ ರಾಯಭಾರಿಗಳು ಸೇರಿದಂತೆ ಹಲವಾರು ಗಣ್ಯರು ಪಾಲ್ಗೊಂಡಿದ್ದರು.

ರಾಷ್ಟ್ರಪತಿಯಾಗಿ ಪ್ರಮಾಣ ಸ್ವೀಕರಿಸುವ ಮುನ್ನ ಗಾಂಧೀಜಿ ಸಮಾಧಿಗೆ ತೆರಳಿ ರಾಮನಾಥ ಕೋವಿಂದ್‌ ಪುಷ್ಪನಮನ ಸಲ್ಲಿಸಿದರು.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮೈಸೂರು ಏಕತಾ ಮಹಲ್‌ ವಿವಾದ, ಕೋರ್ಟ್ ಮೆಟ್ಟಲೇರಿದ ರಾಜಮಾತೆ ಪ್ರಮೋದಾದೇವಿ!
ವಿಮಾನದ ಬಾಲಕ್ಕೆ ಪ್ಯಾರಾಚೂಟ್ ಸಿಲುಕಿ15,000 ಅಡಿ ಎತ್ತರದಲ್ಲಿ ನೇತಾಡಿದ ಸ್ಕೈಡೈವರ್ ಬದುಕುಳಿದಿದ್ದು ಹೇಗೆ? ವೀಡಿಯೋ