
ನವದೆಹಲಿ (ಜೂ.30): ಎನ್’ಡಿಎ ರಾಷ್ಟ್ರಪತಿ ಅಭ್ಯರ್ಥಿ ರಾಮನಾಥ್ ಕೋವಿಂದ್ ನಾಳೆಯಿಂದ ದಕ್ಷಿಣ ಭಾರತದಲ್ಲಿ ಪ್ರಚಾರ ಆರಂಭಿಸಲಿದ್ದಾರೆ. ಈ ಸಂದರ್ಭದಲ್ಲಿ ಅವರು ರಾಷ್ಟ್ರಪತಿ ಚುನಾವಣೆಯಲ್ಲಿ ತಮ್ಮನ್ನು ಬೆಂಬಲಿಸುವಂತೆ ಕೋರಿ ವಿವಿಧ ಪಕ್ಷಗಳ ಜನಪ್ರತಿನಿಧಿಗಳೊಂದಿಗೆ ಸಮಾಲೋಚನೆ ನಡೆಸಲಿದ್ದಾರೆ. ತೆಲಂಗಾಣ, ಆಂಧ್ರಪ್ರದೇಶ ಮತ್ತು ತಮಿಳುನಾಡು ಸೇರಿದಂತೆ ಇತರ ರಾಜ್ಯಗಳಿಗೆ ಭೇಟಿ ನೀಡಲಿರುವ ಬಿಹಾರ ಮಾಜಿ ರಾಜ್ಯಪಾಲ ಕೋವಿಂದ್, ವಿರೋಧ ಪಕ್ಷಗಳ ಸಂಸದರು ಮತ್ತು ಶಾಸಕರನ್ನು ಭೇಟಿ ಮಾಡಿ ಮತ ಯಾಚನೆ ಮಾಡಲಿದ್ದಾರೆ.
ಜು.05 ರಂದು ಕರ್ನಾಟಕಕ್ಕೆ ಆಗಮಿಸಲಿರುವ ರಾಮನಾಥ್ ಕೋವಿಂದ್, ಇಲ್ಲಿನ ಜನಪ್ರತಿನಿಧಿಗಳ ಸಹಕಾರ ಕೋರಲಿದ್ದಾರೆ. ನಾಳೆ ತಮಿಳುನಾಡು, ಜು.04 ರಂದು ತೆಲಂಗಾಣ ರಾಜ್ಯಗಳಿಗೆ ತೆರಳಲಿದ್ದು ಅಲ್ಲಿನ ಆಡಳಿತ ಮತ್ತು ವಿಪಕ್ಷಗಳ ಜನಪ್ರತಿನಿಧಿಗಳ ಜತೆ ಸಮಾಲೋಚಿಸಿ ಮತಯಾಚನೆ ಮಾಡಲಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.