'ರಮ್ಯಾ ಟ್ವೀಟ್'ಗೆ ಜಿ. ಮಾದೇಗೌಡರ ಟಾಂಗ್'

Published : Sep 10, 2016, 06:20 AM ISTUpdated : Apr 11, 2018, 12:37 PM IST
'ರಮ್ಯಾ ಟ್ವೀಟ್'ಗೆ ಜಿ. ಮಾದೇಗೌಡರ ಟಾಂಗ್'

ಸಾರಾಂಶ

ಮಂಡ್ಯ(ಸೆ.10): ಕಾವೇರಿ ಹೋರಾಟದ ಕುರಿತು ದಿನಕ್ಕೊಂದು ರೀತಿಯಲ್ಲಿ ಹೇಳಿಕೆ ನೀಡುತ್ತಾ, ಟ್ವೀಟ್ ಮೂಲಕವೇ ಮಾತನಾಡುತ್ತಿರುವ ನಟಿ, ಮಾಜಿ ಸಂಸದೆ ರಮ್ಯಾ ವಿರುದ್ಧ ಕಾವೇರಿ ಹಿತರಕ್ಷಣಾ ಸಮಿತಿ ಅಧ್ಯಕ್ಷ  ಜಿ ಮಾದೇಗೌಡ ತೀವ್ರ ಅಸಮಾಧಾನಗೊಂಡಿದ್ದಾರೆ. 

ಕಾವೇರಿ ನೀರಿಗಾಗಿ ಆಗ್ರಹಿಸಿ ಮಂಡ್ಯದಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳದ ಮಾಜಿ ಸಂಸದೆ ರಮ್ಯಾ, ಹೋರಾಟದ ಕುರಿತು ಅಸಂಬದ್ಧ ಹೇಳಿಕೆ ನೀಡುತ್ತಿದ್ದು, ಇದರಿಂದ ಅಸಮಾಧಾನಗೊಂಡಿರುವ ಜಿ ಮಾದೇಗೌಡ ಬೇಜವಾಬ್ದಾರಿ ಹೇಳಿಕೆ ನೀಡುವವರ ಬಗ್ಗೆ ಪ್ರತಿಕ್ರಿಯೆ ನೀಡುವುದಿಲ್ಲ ಎಂದಿದ್ದಾರೆ. 

ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಮಾದೇಗೌಡ, ರಮ್ಯಾಗೆ ಅನುಭವ ಕಮ್ಮಿ,ರಾಜಕೀಯದಲ್ಲಿ ಕಲಿಕಬೇಕಾದ್ದು ಭಾರಿ ಇದೆ. ಈ ಹಿಂದೆ ಆಕೆ ನನ್ನನ್ನು ಭೇಟಿ ಮಾಡಿದ ಸಂದರ್ಭದಲ್ಲಿ ಮಂಡ್ಯಗೆ ಬಂದು ಕಾವೇರಿ ಹೋರಾಟದಲ್ಲಿ ಭಾಗವಹಿಸುವಂತೆ ತಿಳಿಸಿದ್ದೇ, ಆದರೆ ಪ್ರತಿಭಟನೆಯಲ್ಲಿ ಅವರು ಕಾಣಿಸಿಕೊಂಡಿಲ್ಲ ಹಾಗಾಗಿ ಆ ಕುರಿತು ನಾನು ಪ್ರತಿಕ್ರಿಯೆ ನೀಡುವುದಿಲ್ಲ ಎಂದಿದ್ದಾರೆ.

ಸಮಯ ಬಂದಾಗ ಜನರೇ ರಮ್ಯಾಗೆ ಸರಿಯಾದ ರೀತಿಯಲ್ಲಿ ಉತ್ತರ ನೀಡುತ್ತಾರೆ, ಸುಮ್ಮನೆ ನಾನೇಕೆ ಈಗ ಪ್ರತಿಕ್ರಿಯಿಸಲಿ ಎನ್ನುವ ಮೂಲಕ ರಮ್ಯಾ ಮಾಡುತ್ತಿರುವುದು ಸರಿ ಇಲ್ಲ ಎಂಬುದನ್ನು ಪರೋಕ್ಷವಾಗಿ ತಿಳಿಸಿದ್ದಾರೆ.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಬಳ್ಳಾರಿಯಲ್ಲಿ ಎಫ್‌ಡಿಎ ಸ್ಪರ್ಧಾತ್ಮಕ ಪರೀಕ್ಷೆ: ಕಾಲು ಗೆಜ್ಜೆ ತೆಗೆದು ಪರೀಕ್ಷೆ ಬರೆದ ವಿದ್ಯಾರ್ಥಿನಿಯರು
ಜವರಾಯನಂತೆ ಬಂತು ಜಲ್ಲಿಕಲ್ಲು ತುಂಬಿದ್ದ ಲಾರಿ: ಮನೆ ಮುಂದೆ ಚಳಿ ಕಾಯಿಸುತ್ತಿದ್ದ 90 ವರ್ಷದ ವೃದ್ಧ ಬಲಿ