
ಬೆಂಗಳೂರು[ಮೇ.17]: ಕರ್ನಾಟಕ ರಣಜಿ ಕ್ರಿಕೆಟಿಗ ಹಾಗೂ ಬಿಗ್’ಬಾಸ್ ಖ್ಯಾತಿಯ ಎನ್.ಸಿ ಅಯ್ಯಪ್ಪ, ಗೆಳತಿ ನಟಿ ಮಾಳೇಟಿರ ಅನು ಅವರೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.
ಇಲ್ಲಿನ ವಸಂತನಗರದಲ್ಲಿ ಗುರು-ಹಿರಿಯರ ಸಮ್ಮುಖದಲ್ಲಿ ಕೊಡವ ಸಂಪ್ರದಾಯದಂತೆ ನಿಶ್ಚಿತಾರ್ಥ ನೆರವೇರಿದೆ.
ಕನ್ನಡದ ಕರ್ವ, ಲೈಫ್ ಸೂಪರ್ ಸೇರಿದಂತೆ ಹಲವು ಚಿತ್ರಗಳಲ್ಲಿ ನಟಿಸಿರುವ ಮಾಳೇಟಿರ ಅನು ಅವರನ್ನು ಅಯ್ಯಪ್ಪ ವರಿಸಲಿದ್ದಾರೆ.
ಕಳೆದೊಂದು ವರ್ಷದಿಂದ ಪರಸ್ಪರ ಪ್ರೀತಿಸುತ್ತಿದ್ದ ಈ ಜೋಡಿ ಇದೀಗ ನಿಶ್ಚಿತಾರ್ಥ ಮಾಡಿಕೊಂಡಿದ್ದು, ಮುಂದಿನ ವರ್ಷ ಸಪ್ತಪದಿ ತುಳಿಯಲಿದ್ದಾರೆ ಎನ್ನಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.