
ಬೆಂಗಳೂರು(ಮೇ.27): ರೈತರ ಸಾಲ ಮನ್ನಾಗೆ ಆಗ್ರಹಿಸಿ ಬಿಜೆಪಿ ಕರೆ ನೀಡಿರುವ ಕರ್ನಾಟಕ ಬಂದ್ ಹಿನ್ನಲೆಯಲ್ಲಿ ಬೆಳಗಾವಿಯ ರಾಣಿ ಚೆನ್ನಮ್ಮ ವಿವಿಯ ಪದವಿ ಪರೀಕ್ಷೆಗಳನ್ನು ಮುಂದೂಡಿರುವುದಾಗಿ ಮೌಲ್ಯ ಮಾಪನ ಕುಲಸಚಿವ ರಂಗರಾಜ ವನದುರ್ಗ ತಿಳಿಸಿದ್ದಾರೆ.
ಬಂದ್ ಗೆ ಕರೆಗೆ ಖಾಸಗಿ ಮ್ಯಾಕ್ಸಿಕ್ಯಾಬ್ ಹಾಗೂ ಪೆಟ್ರೋಲ್ ಪಂಪ್ ಸಂಘಟನೆ ಬೆಂಬಲ ನೀಡದಿರಲು ನಿರ್ಧರಿಸಿವೆ. ಇವೆರಡು ಸೇವೆಗಳು ಎಂದಿನಂತೆ ಇರುತ್ತವೆ ಎಂದು ಆಯಾ ಸಂಘಟನೆಗಳ ಅಧ್ಯಕ್ಷರು ತಿಳಿಸಿದ್ದಾರೆ.
ಆರ್ ಆರ್ ನಗರ ಚುನಾವಣಾ ಹಿನ್ನಲೆಯಲ್ಲಿ ನಗರದ ನಾಗರಭಾವಿಯಲ್ಲಿರುವ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರವಿಗೌಡ ಮನೆ ಮೇಲೆ ಚುನಾವಣಾ ವಿಚಕ್ಷಣದಳದ ಅಧಿಕಾರಿಗಳು ದಾಳಿ ನಡೆಸಿ ಮನೆಯಲ್ಲಿದ್ದ ದೊಡ್ಡ ಪ್ರಮಾಣದ ಹಣ ವಶಕ್ಕೆ ಪಡೆದಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.