
ಬೊಮ್ಮನಹಳ್ಳಿ: ಇತ್ತೀಚೆಗೆ ಭಾರಿ ಸುದ್ದಿಯಾಗಿರುವ ಮೀ ಟೂ ಅಭಿಯಾನದ ಬಗ್ಗೆ ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಅವರು ಸಂತಸ ವ್ಯಕ್ತಪಡಿಸಿದ್ದಾರೆ.
ಬೆಂಗಳೂರಿನ ಎಚ್‌ಎಸ್‌ಆರ್ ಬಡಾವಣೆಯ ಖಾಸಗಿ ಕಾರ‍್ಯಕ್ರಮದಲ್ಲಿ ಭಾಗವಹಿಸಿದ್ದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೀ ಟೂ ಅಭಿಯಾನದಿಂದಾಗಿಯೇ ಅಭಿಪ್ರಾಯಗಳು ವ್ಯಕ್ತವಾಗುತ್ತಿವೆ. ಮೀ ಟೂ ಅಭಿಯಾನದಿಂದ ಎಲ್ಲರೂ ಅವರ ಅಭಿಪ್ರಾಯಗಳನ್ನು ತಿಳಿಸುತ್ತಿದ್ದಾರೆ. ಇದರಿಂದ ತುಂಬ ಖುಷಿ ಆಗುತ್ತಿದೆ ಎಂದು ತಿಳಿಸಿದರು.
ನಟ ಅರ್ಜುನ್ ಸರ್ಜಾ ಹಾಗೂ ನಟಿ ಶೃತಿ ಹರಿಹರನ್ ವಿವಾದದ ಬಗ್ಗೆ ಪ್ರಶ್ನಿಸಿದ ಬಗ್ಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಅವರು, ಅರ್ಜುನ್ ಸರ್ಜಾ - ಶೃತಿ ಪ್ರಕರಣ ನಾನೇನು ಹೇಳಲಿ ಎಂದು ನುಣುಚಿಕೊಂಡರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.