
ಬೆಂಗಳೂರು: ಹಾಲಿ ಮುಖ್ಯಕಾರ್ಯದರ್ಶಿ ಸುಭಾಷ ಚಂದ್ರ ಕುಂಟಿಯಾ ಅವರ ಅಧಿಕಾರವಧಿ ನವೆಂಬರ್ 30ಕ್ಕೆ ಮುಕ್ತಾಯವಾಗಲಿದ್ದು, ಮುಖ್ಯ ಕಾರ್ಯದರ್ಶಿ ಹುದ್ದೆಗೆ ಹಿರಿಯ ಐಎಎಸ್ ಅಧಿಕಾರಿ ಕೆ. ರತ್ನಪ್ರಭಾ ಅವರ ಹೆಸರನ್ನು ರಾಜ್ಯ ಸರ್ಕಾರ ಅಂತಿಮಗೊಳಿಸಿದೆ. ಈ ಮೂಲಕ ರಾಜ್ಯದ ಪ್ರಮುಖ ಹುದ್ದೆಗಳನ್ನು ಮಹಿಳಾ ಅಧಿಕಾರಿಗಳು ಅಲಂಕರಿಸಿದಂತಾಗಿದೆ.
ಕೆ. ರತ್ನಪ್ರಭಾ ಅವರು ದಲಿತ ಸಮುದಾಯಕ್ಕೆ ಸೇರಿದ ಓರ್ವ ಮಹಿಳಾ ಅಧಿಕಾರಿ ರಾಜ್ಯ ಸರ್ಕಾರದ ಆಡಳಿತ ವಿಭಾಗದ ಮುಖ್ಯಸ್ಥ ಹುದ್ದೆಯಾದ ಮುಖ್ಯ ಕಾರ್ಯದರ್ಶಿ ಹುದ್ದೆಗೆ ನೇಮಕವಾದಂತಾಗಿದೆ. ಕಳೆದ ಬಾರಿಯೇ ರತ್ನಪ್ರಭಾ ಅವರಿಗೆ ಸಿಎಸ್ ಹುದ್ದೆ ಸ್ವಲ್ಪದರಲ್ಲಿಯೇ ತಪ್ಪಿ ಹೋಗಿತ್ತು.
ಪೊಲೀಸ್ ಇಲಾಖೆ ಮಹಾ ನಿರ್ದೇಶಕಿಯಾಗಿ ಈಗಾಗಲೇ ನೀಲಮಣಿ ಎನ್. ರಾಜು ಕಾರ್ಯ ನಿರ್ವಹಿಸುತ್ತಿದ್ದಾರೆ.
ಇದಲ್ಲದೇ ರಾಜ್ಯ ಪೊಲೀಸ್ ಮಹಾ ನಿರ್ದೇಶಕರ ಹುದ್ದೆಗೆ ನೀಲಮಣಿ ಎನ್ ರಾಜು ಅವರ ನೇಮಕದ ದಿನಗಳಲ್ಲಿಯೇ ಕನ್ನಡಪ್ರಭ ರತ್ನಪ್ರಭಾ ಸಿಎಸ್ ಹುದ್ದೆಗೆ ನೇಮಕವಾಗಬಹುದೆಂಬ ಸುದ್ದಿಯನ್ನು ಪ್ರಕಟಿಸಿತ್ತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.