ಪತ್ರಕರ್ತ ರವಿ ಬೆಳಗೆರೆ ಅರೆಸ್ಟ್..! ಬೆಳಗೆರೆ ಬಂಧನವಾಗಿದ್ದೇಕೆ ಗೊತ್ತಾ..? ಇದು ರಾಜ್ಯವೇ ಬೆಚ್ಚಿಬೀಳಿಸುವ ಸುದ್ದಿ

Published : Dec 08, 2017, 02:11 PM ISTUpdated : Apr 11, 2018, 12:49 PM IST
ಪತ್ರಕರ್ತ ರವಿ ಬೆಳಗೆರೆ ಅರೆಸ್ಟ್..! ಬೆಳಗೆರೆ ಬಂಧನವಾಗಿದ್ದೇಕೆ ಗೊತ್ತಾ..? ಇದು ರಾಜ್ಯವೇ ಬೆಚ್ಚಿಬೀಳಿಸುವ ಸುದ್ದಿ

ಸಾರಾಂಶ

ಗೌರಿ ಲಂಕೇಶ್ ಹತ್ಯೆ ವಿಚಾರಣೆ ವೇಳೆ ಬಂಧಿತನಾಗಿದ್ದ ಭೀಮಾ ತೀರದ ಶಾರ್ಪ್ ಶೂಟರ್ ರವಿ ಬೆಳಗೆರೆಯಿಂದ ಕೊಲೆ ಸುಪಾರಿ ಪಡೆದಿದ್ದಾಗಿ ಬಾಯ್ಬಿಟ್ಟಿದ್ದಾನೆ. ವಿಜಯಪುರದ ಚಡಚಣದ  ಶಾರ್ಪ್ ಶೂಟರ್ ಶಶಿ ಮುಂಡೇವಾಡಗಿ ಸಿಸಿಬಿ ಪೊಲೀಸರ ಮುಂದೆ ಸ್ಫೋಟಕ ಮಾಹಿತಿ ಹೊರಹಾಕಿದ್ದಾನೆ.

ಬೆಂಗಳೂರು(ಡಿ.08): ಪತ್ರಕರ್ತ ರವಿ ಬೆಳಗೆರೆ ಅವರನ್ನು ನಗರದ ಪದ್ಮನಾಭನಗರದ ನಿವಾಸದಲ್ಲಿ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಕೊಲೆಗೆ ಸುಪಾರಿ ಕೊಟ್ಟ ಆರೋಪದಡಿ ರವಿ ಬೆಳಗೆರೆ ಬಂಧನವಾಗಿದೆ.

ಹೌದು, ಗೌರಿ ಲಂಕೇಶ್ ಹತ್ಯೆ ವಿಚಾರಣೆ ವೇಳೆ ಬಂಧಿತನಾಗಿದ್ದ ಭೀಮಾ ತೀರದ ಶಾರ್ಪ್ ಶೂಟರ್ ರವಿ ಬೆಳಗೆರೆಯಿಂದ ಕೊಲೆ ಸುಪಾರಿ ಪಡೆದಿದ್ದಾಗಿ ಬಾಯ್ಬಿಟ್ಟಿದ್ದಾನೆ. ವಿಜಯಪುರದ ಚಡಚಣದ  ಶಾರ್ಪ್ ಶೂಟರ್ ಶಶಿ ಮುಂಡೇವಾಡಗಿ ಸಿಸಿಬಿ ಪೊಲೀಸರ ಮುಂದೆ ಸ್ಫೋಟಕ ಮಾಹಿತಿ ಹೊರಹಾಕಿದ್ದಾನೆ.

ರವಿ ಬೆಳಗೆರೆ ಎರಡನೇ ಪತ್ನಿ ಜತೆ ಹಾಯ್ ಬೆಂಗಳೂರು ಪತ್ರಿಕೆ ವರದಿಗಾರ ಸನೀಲ್ ಹೆಗ್ಗರವಳ್ಳಿ ಅಕ್ರಮ ಸಂಬಂಧದ ಆರೋಪ ಕೇಳಿ ಬಂದಿತ್ತು. ಈ ಬಗ್ಗೆ ಸುನೀಲ್ ಹತ್ಯೆ ಮಾಡಲು ನಿರ್ಧರಿಸಿದ್ದ ಬೆಳಗೆರೆ ಶಾರ್ಪ್ ಶೂಟರ್ ಶಶಿ ಮುಂಡೇವಾಡಗಿಗೆ 30 ಲಕ್ಷ ರುಪಾಯಿ ಸುಪಾರಿ ಕೊಟ್ಟಿದ್ದ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕಾಂಗ್ರೆಸ್ ನಾಯಕರ ಕುಟುಂಬಕ್ಕೆ ಸಂಕಷ್ಟ: ಏನಿದು ಕೇಸ್?
ದೇಶದಲ್ಲಿ ಬಂಗಾರ, ಬೆಳ್ಳಿ ದಾಖಲೆ : ಬೆಲೆ ಏರಿಕೆ ಪರ್ವದ ಹಿಂದಿನ ರಹಸ್ಯ ಏನು?