
ಬೆಂಗಳೂರು : ಐಪಿಎಸ್ ಅಧಿಕಾರಿ ಮಧುಕರ್ ಶೆಟ್ಟಿ ಹೈದರಾಬಾದ್ನಲ್ಲಿ ಕೊನೆ ಉಸಿರೆಳೆದಿದ್ದಾರೆ. ಎಚ್1ಎನ್1, ಶ್ವಾಸಕೋಶದ ಸೋಂಕಿನಿಂದ ಬಳಲುತ್ತಿದ್ದ ಮಧುಕರ್ ಶೆಟ್ಟಿ ಹೈದರಾಬಾದ್ನ ಕಾಂಟಿನೆಂಟಲ್ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ.
ದಕ್ಷ ಅಧಿಕಾರಿಯ ನಿಧನಕ್ಕೆ ಹಲವು ಗಣ್ಯರು ಕಂಬನಿ ಮಿಡಿದಿದ್ದಾರೆ. ದಕ್ಷ ಅಧಿಕಾರಿಯನ್ನು ಕಳೆದುಕೊಂಡು ರಾಜ್ಯಕ್ಕೆ ತುಂಬಲಾರದ ನಷ್ಟವಾಗಿದೆ.
ಮಧುಕರ್ ಶೆಟ್ಟಿ ನಿಧನಕ್ಕೆ ಐಪಿಎಸ್ ಅಧಿಕಾರಿ ರವಿ ಡಿ. ಚನ್ನಣ್ಣನವರ್ ಟ್ವೀಟ್ ಮಾಡಿ ಸಂತಾಪ ಸೂಚಿಸಿದ್ದಾರೆ.
ಅತ್ಯಂತ ಸಜ್ಜನ , ಶುದ್ಧ ಹಸ್ತ, ಕರ್ತವ್ಯವೇ ದೇವರೆಂದು ತಿಳಿದ ಮಹಾನ್ ಮಾನವತಾವಾದಿಯಾಗಿದ್ದ ನಮ್ಮೆಲ್ಲರ ನಲ್ಮೆಯ ಶ್ರೀ ಮಧುಕರ ಶೆಟ್ಟಿ ಅವರ ಆತ್ಮಕ್ಕೆ ಶಾಂತಿ ದೊರಕಲಿ.
ಸರ್ ನಿಮ್ಮ ಅಕಾಲಿಕ ಮರಣ ನಮಗೆ ನೋವುಂಟು ಮಾಡಿದೆ. ಇವರ ಅಗಲಿಕೆಯ ದುಃಖ ಭರಿಸುವ ಶಕ್ತಿ ಅವರ ಕುಟುಂಬಕ್ಕೆ ದೇವರು ಕರುಣಿಸಲಿ ಎಂದು ಟ್ವೀಟ್ ಮಾಡಿದ್ದಾರೆ.
1 ವಾರದಿಂದ ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟ ನಡೆಸುತ್ತಿದ್ದರು. 1999ರ ಬ್ಯಾಚ್ ಐಪಿಎಸ್ ಅಧಿಕಾರಿ ಮಧುಕರ್ ಶೆಟ್ಟಿ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಚಾಮರಾಜನಗರ ಜಿಲ್ಲೆ, ಚಿಕ್ಕಮಗಳೂರು ಜಿಲ್ಲೆ ಸೇರಿ ರಾಜ್ಯದ ಹಲವೆಡೆ ಸೇವೆ ಸಲ್ಲಿಸಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.