
ನವದೆಹಲಿ : ನಿರಂತರವಾಗಿ ಪೆಟ್ರೋಲ್, ಡೀಸೆಲ್ ದರ ಏರಿಕೆಯಿಂದ ಕಂಗೆಟ್ಟಿರುವ ಜನರಿಗೆ ಇದೀಗ ಮತ್ತೊಂದು ಶಾಕ್ ದೊರಕಿದೆ. ಆರ್ ಬಿಐ ಇದೀಗ ತನ್ನ ರೆಪೋ ದರ ಏರಿಕೆ ಮಾಡಿದೆ. 6 ರಿಂದ 6.5ಕ್ಕೆ ಏರಿಕೆ ಮಾಡಿದ್ದಾಗಿ ಆರ್‌ಬಿಐ ಗವರ್ನರ್ ಊರ್ಜಿತ್ ಪಟೇಲ್ ಮಾಹಿತಿ ನೀಡಿದ್ದಾರೆ.
ಬರೋಬ್ಬರಿ 4 ವರ್ಷಗಳ ನಂತರ ಮೊದಲ ಬಾರಿಗೆ ಭಾರತೀಯ ರಿಸರ್ವ್ ಬ್ಯಾಂಕ್ ತನ್ನ ರೆಪೋ ದರವನ್ನು ಏರಿಸಿದೆ. ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಆಡಳಿತ ಆರಂಭ ಮಾಡಿದ ಬಳಿಕ ಇದೇ ಮೊದಲ ಬಾರಿ ಆರ್ ಬಿಐ ರೆಪೋ ದರವನ್ನು ಏರಿಸಿದೆ.
ಇದೀಗ ಬ್ಯಾಂಕ್ ಗಳ ರೆಪೋ ದರವನ್ನು ಏರಿಕೆ ಮಾಡಿದ ಹಿನ್ನೆಲೆಯಲ್ಲಿ ಬ್ಯಾಂಕ್ ಗಳು ತನ್ನ ಗ್ರಾಹಕರಿಗೆ ನೀಡುವ ಗೃಹ ಸಾಲ ಹಾಗೂ ಅದರ ಬಡ್ಡಿ ದರ ಅಧಿಕ ಪ್ರಮಾಣದಲ್ಲಿ ಏರಿಕೆಯಾಗುವ ಸಾಧ್ಯತೆ ಇದೆ. ರೆಪೋ ದರ ಏರಿಕೆಯಿಂದ ದೇಶದಲ್ಲಿ ಗೃಹ ಸಾಲದ ಮೇಲಿನ ಬಡ್ಡಿದರವು ಶೇ.0.25ರಷ್ಟು ಏರಿಕೆಯಾಗಬಹುದು ಎನ್ನಲಾಗಿದೆ.
ರಿಸರ್ವ್ ಬ್ಯಾಂಕ್ ಇತರೆ ಬ್ಯಾಂಕ್ ಗಳಿಗೆ ನೀಡುವ ಸಾಲದ ಮೇಲಿನ ಬಡ್ಡಿದರವನ್ನು ರೆಪೋ ದರ ಎನ್ನಲಾಗುತ್ತದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.