
ನವದೆಹಲಿ(ಮಾ.11): ಮೊನ್ನೆ ಪಂಚರಾಜ್ಯಗಳ ಚುನಾವಣೋತ್ತರ ಸಮೀಕ್ಷೆಯ ಅಂಕಿ-ಅಂಶಗಳು ಬಹಿರಂಗವಾಗುತ್ತಿದಂತೆ ರಾಜಕೀಯ ಮುಖಂಡರು ತಮ್ಮದೇ ರೀತಿಯಲ್ಲಿ ಎಕ್ಸಿಟ್ ಪೋಲ್ ರೀಸಲ್ಟ್ ಅನ್ನು ವಿಮರ್ಶೆ ಮಾಡುತ್ತಿದ್ದಾರೆ. ಸೋಲಿನ ಮುನ್ಸೂಚೆನೆ ಕಂಡವರು ಹಾಗೂ ಗೆಲುವಿನ ವಿಭಿನ್ನ ಪ್ರತಿಕ್ರಿಯೆ ನೀಡಿದ್ದಾರೆ. ಆ ಕುರಿತ ಸಂಪೂರ್ಣ ವರದಿ.
ಪಂಚರಾಜ್ಯಗಳ ಚುನಾವಣೋತ್ತರ ಸಮೀಕ್ಷೆ ಬಹಿರಂಗವಾಗಿದೆ. ಸಮೀಕ್ಷೆಗಳ ಫಲಿತಾಂಶದಿಂದ ಬಿಜೆಪಿ ನಾಯಕರು ಗೆಲ್ಲುವಿನ ಪತಾಕೆ ಹಾರಿಸಲು ಸಕಲ ಸಿದ್ಧತೆ ನಡೆಸಿದ್ದಾರೆ. ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಕೇಂದ್ರ ಸಚಿವ ಮುಖ್ತಾರ್ ಅಬ್ಬಸ್ ನಖ್ವಿ ಸಮಾಜವಾದಿ ಪಕ್ಷಕ್ಕೆ ಟಾಂಗ್ ನೀಡಿದ್ದರು.
ಚುನಾವಣೋತ್ತರ ಸಮೀಕ್ಷೆ ನೋಡಿದ ಉತ್ತರ ಪ್ರದೇಶದ ಸಿಎಂ ಅಖಿಲೇಶ್ ಯಾದವ್ ಬಿಜೆಪಿಯನ್ನು ಹೊರಗಿಟ್ಟು ಬಿಎಸ್‍ಪಿ ಜೊತೆಗಾದರೂ ಮೈತ್ರಿಗೆ ಸಿದ್ಧ ಅಂತ ಪ್ಲಾನ್ ಮಾಡಿದ ಅಖಿಲೇಶ್ ಯಾದವ್ ಕನಸು ಕನಸಾಗಿ ಉಳಿದುಕೊಳ್ಳಲಿದೆ.
ಬಂದಿರುವ ಸಮೀಕ್ಷೆ ಸರಿಯಾಗಿಲ್ಲ. ಯಾವುದೇ ಆಧಾರವಿಲ್ಲ. ಹೀಗಾಗಿ ಉತ್ತರಪ್ರದೇಶದಲ್ಲಿ ಸಮಾಜವಾದಿ ಪಕ್ಷವೇ ಮತ್ತೆ ಅಧಿಕಾರಕ್ಕೆ ಬರುತ್ತದೆ ಅದರಲ್ಲಿ ಎರಡು ಮಾತಿಲ್ಲವೆಂದು ನುಡಿದ್ದರು. ಇನ್ನು ಉತ್ತರಾಖಂಡ್ ಸಿಎಂ ಹರೀಶ್ ರಾವತ್ ಮಾತನಾಡಿ ಚುನಾವಣೋತ್ತರ ಸಮೀಕ್ಷೆ ಕೇವಲ ಚುನಾವಣೋತ್ತರ ಸಮೀಕ್ಷೆಯಾಗಿದೆ. ಇದು ಜನರ ಅಂತಿಮ ತೀರ್ಮಾನವಲ್ಲವೆಂದು ಸಮೀಕ್ಷೆಯನ್ನು ಅಲೆಗಳೆದ್ದರು.
ಇನ್ನು ರಾಹುಲ್ಗಾಂಧಿ ಫಲಿತಾಂಶ ಪ್ರಕಟಗೊಂಡ ಬಳಿಕವೇ ನಾವು ಮಾತನಾಡುತ್ತೇವೆಂದು ರಾಹುಲ್ ಮಾಧ್ಯಮಗಳೊಂದಿಗೆ ಮಾತನಾಡಲು ನಿರಾಕರಿಸಿದ್ದರು. ಒಟ್ಟಿನಲ್ಲಿ ಚುನಾವಣೋತ್ತರ ಸಮೀಕ್ಷೆಯಲ್ಲಿ ಬಿಜೆಪಿಗೆ ಬಹುಮತ ಸಿಕ್ಕಿದೆ. ಮತ ಎಣಿಕೆಯಲ್ಲಿ ಯಾವ ಪಕ್ಷಕ್ಕೆ ಸಿಗುತ್ತೆ, ಯಾವ ರಾಜ್ಯದಲ್ಲಿ ಯಾರು ಅಧಿಕಾರಕ್ಕೆ ಬರುತ್ತಾರೆ ಎಂಬುವುದು ಸ್ಪಷ್ಟವಾಗಿ ನಾಳೆ ಗೊತ್ತಾಗಲಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.