
ಕಲಬುರಗಿ/ ಬೀದರ್: ಮುಂದಿನ ವಿಧಾಸಭಾ ಚುನಾವಣೆಯಲ್ಲಿ ವಿಜಯಪುರ ಅಥವಾ ಬಾಗಲಕೋಟೆಯಿಂದ ಕಣಕ್ಕಿಳಿಯುತ್ತೇನೆ ಎಂದು ತಿಳಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ, ‘ನನ್ನ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪರ್ಧಿಸಿದರೆ ಸ್ವಾಗತಿಸುತ್ತೇನೆ’ ಎಂದು ಸವಾಲು ಎಸೆದಿದ್ದಾರೆ.
ಅಲ್ಲದೇ ಸಿಎಂ ಸಿದ್ದರಾಮಯ್ಯ, ಅವರ ಕುಟುಂಬಸ್ಥರು, ಕಾಂಗ್ರೆಸ್ ಸಚಿವರು, ಶಾಸಕರ ಭ್ರಷ್ಟಾಚಾರದ ಕರ್ಮಕಾಂಡದ ಬಗ್ಗೆ ಸೆ.23ರಂದು ಬೆಂಗಳೂರಿನಲ್ಲಿ ಚಾರ್ಜ್ಶೀರ್ಟ್ ಬಿಡುಗಡೆ ಮಾಡಲಾಗುತ್ತದೆ ಎಂದು ಹೇಳಿದ್ದಾರೆ.
ರಾಜ್ಯ ಸರ್ಕಾರದ ಹರಿಹಾಯ್ದಿರುವ ಅವರು, ನ.1ರಂದು ಬಿಜೆಪಿ ವತಿಯಿಂದ ರಾಜ್ಯದ ಎಲ್ಲಾ ವಿಧಾಸಭಾ ಕ್ಷೇತ್ರಗಳಲ್ಲಿ ನವ ಕರ್ನಾಟಕ ಪರಿವರ್ತನಾ ಯಾತ್ರೆ ನಡೆಯಲಿದ್ದು, ಇದಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರೇ ಚಾಲನೆ ನೀಡಲಿದ್ದಾರೆ ಎಂದು ತಿಳಿಸಿದ್ದಾರೆ.
ಸಿಎಂ ಸ್ಪರ್ಧಿಸಿದರೆ ಸ್ವಾಗತ: ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಉತ್ತರ ಕರ್ನಾಟಕದಿಂದ ಕಣಕ್ಕಿಳಿಯುತ್ತೇನೆ. ವಿಜಯಪುರ ಇಲ್ಲವೇ ಬಾಗಲಕೋಟೆಯಿಂದ ಸ್ಪರ್ಧಿಸುತ್ತೇನೆ. ಪಕ್ಷದ ಮುಖಂಡರ ಸಲಹೆ- ಸೂಚನೆ ಪಡೆದೇ ಅಂತಿಮ ತೀರ್ಮಾನ ಕೈಗೊಳ್ಳುತ್ತೇನೆ. ಉತ್ತರ ಕರ್ನಾಟಕ ಭಾಗದಿಂದಲೇ ಜನಾದೇಶ ಪಡೆಯುವ ವಿಶ್ವಾಸವಿದೆ. ಸಿಎಂ ಸಿದ್ದರಾಮಯ್ಯ ತಮ್ಮ ವಿರುದ್ಧ ಕಣಕ್ಕಿಳಿದರೆ ಪ್ರೀತಿ- ವಿಶ್ವಾಸದಿಂದ ಸ್ವಾಗತಿಸುತ್ತೇನೆ ಎಂದರು.
23ಕ್ಕೆ ಚಾರ್ಜ್‌ಶೀಟ್: ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತವರ ಕುಟುಂಬದ ಸದಸ್ಯರು, ಸಚಿವರು, ಶಾಸಕರ ಭ್ರಷ್ಟಾಚಾರದ ವಿರುದ್ಧ ಬೆಂಗಳೂರಿನಲ್ಲಿ ಸೆ.23ಕ್ಕೆ ಜಾರ್ಚ್‌ಶೀಟ್ ಬಿಡುಗಡೆ ಮಾಡಲಾಗುತ್ತದೆ. ಸಿಎಂ, ಅವರ ಕುಟುಂಬ ಸದಸ್ಯರು ಹಾಗೂ ನಾಲ್ವರು ಸಂಪುಟ ಸಚಿವರು, ಹಲವರು ಶಾಸಕರು ಒಳಗೊಂಡಿರುವ ಭ್ರಷ್ಟಾಚಾರದ ಮಾಹಿತಿ ಹೊರಹಾಕುತ್ತಿವೆ ಎಂದು ತಿಳಿಸಿದರು. ರಾಜ್ಯದಲ್ಲಿ ಕಾನೂನು- ಸುವ್ಯವಸ್ಥೆ ಹದಗೆಟ್ಟಿದೆ, ಭ್ರಷ್ಟಾಚಾರ ಮುಗಿಲು ಮುಟ್ಟಿದೆ. ಆಡಳಿತ ನಿಂತ ನೀರಾಗಿದೆ. ಎಲ್ಲವೂ ಆಯೋಮಯ ಎಂದು ಹೇಳಿದರು. ಅಲ್ಲದೇ ನ.೧ರಂದು ರಾಜ್ಯದ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲಿ ನವ ಕರ್ನಾಟಕ ನಿರ್ಮಾಣ ಪರಿವರ್ತನಾ ಯಾತ್ರೆ ನಡೆಸಲಾಗುವುದು. ಪ್ರಧಾನಿ ನರೇಂದ್ರ ಮೋದಿಯವರೇ ಈ ರ್ಯಾಲಿಗೆ ಬೆಂಗಳೂರಲ್ಲಿ ಚಾಲನೆ ನೀಡಲಿದ್ದಾರೆ ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.