ಬೈ ಎಲೆಕ್ಷನ್: ಮಸ್ಕಿ, RR ನಗರ ಕ್ಷೇತ್ರಗಳಿಗೆ ಚುನಾವಣೆಯಾಕಿಲ್ಲ? ಕಾರಣ ಇಲ್ಲಿದೆ

By Web Desk  |  First Published Sep 21, 2019, 4:24 PM IST

17 ಕ್ಷೇತ್ರಗಳ ಪೈಕಿ 15 ಕ್ಷೇತ್ರಗಳಿಗೆ ಉಪಚುನಾವಣೆ ಘೋಷಣೆಯಾಗಿದ್ದು, ಇನ್ನುಳಿದ 2 ಕ್ಷೇತ್ರಗಳಿಗೆ ಏಕೆ ಚುನಾವಣೆ ಘೋಷಣೆಯಾಗಿಲ್ಲ ಎನ್ನುವ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಮಸ್ಕಿ ಹಾಗೂ ಆರ್‌ಆರ್‌ ನಗರ ಕ್ಷೇತ್ರಗಳಿಗೆ ಏಕೆ ಬೈ ಎಲೆಕ್ಷನ್ ಇಲ್ಲ? ಕಾರಣ ಈ ಕೆಳಗಿನಂತಿದೆ.


ಬೆಂಗಳೂರು, (ಸೆ.21): ಕಾಂಗ್ರೆಸ್ ಹಾಗೂ ಜೆಡಿಎಸ್‌ನಿಂದ ಅನರ್ಹಗೊಂಡೊರುವ 17 ಶಾಸಕರ ಕ್ಷೇತ್ರಗಳ ಪೈಕಿ 15 ಕ್ಷೇತ್ರಗಳಿಗೆ ಕೇಂದ್ರ ಚುನಾವಣೆ ಆಯೋಗ ಉಪಚುನಾವಣೆ ದಿನಾಂಕ ಘೋಷಣೆ ಮಾಡಿದೆ.

17 ಕ್ಷೇತ್ರಗಳ ಪೈಕಿ 15 ಕ್ಷೇತ್ರಗಳಿಗೆ ಏಕಿ ಉಪಚುನಾವಣೆ? ಉಳಿದ ಮಸ್ಕಿ ಮತ್ತು ಬೆಂಗಳೂರಿನ ರಾಜರಾಜೇಶ್ವರಿ ನಗರ (ಆರ್‌ಆರ್‌ ನಗರ) ಕ್ಷೇತ್ರಗಳಿಗೆ ಬೈ ಎಲೆಕ್ಷನ್ ಏಕೆ ಇಲ್ಲ?  ಎನ್ನುವ ಚರ್ಚೆ ರಾಜ್ಯ ರಾಜಕಾರಣದಲ್ಲಿ ಶುರುವಾಗಿತ್ತು. ಇದೀಗ ಚರ್ಚೆಗಳಿಗೆ ಕರ್ನಾಟಕ ಚುನಾವಣೆ ಆಯೋಗದ ಮುಖ್ಯಸ್ಥ ಸಂಜೀವ್ ಕುಮಾರ್ ಅವರು ತೆರೆ ಎಳೆದಿದ್ದಾರೆ.

Latest Videos

ಕರ್ನಾಟಕ 15 ಕ್ಷೇತ್ರದ ಉಪಚುನಾವಣೆಗೆ ದಿನಾಂಕ ಫಿಕ್ಸ್!: ಅನರ್ಹರಿಗೆ ಟೆನ್ಶನ್

ಇಂದು (ಶನಿವಾರ) ಕೇಂದ್ರ ಚುನಾವಣೆ ಆಯೋಗ ಕರ್ನಾಟಕದ 15 ಕ್ಷೇತ್ರಗಳಿಗೆ ಉಪಚುನಾವಣೆ ದಿನಾಂಕ ಘೋಷಿಸುತ್ತಿದ್ದಂತೆಯೇ ಇತ್ತ ಕರ್ನಾಟಕ ಚುನಾವಣೆ ಆಯೋಗದ ಮುಖ್ಯಸ್ಥ ಸಂಜೀವ್ ಕುಮಾರ್ ಅವರು ಸುದ್ದಿಗೋಷ್ಠಿ ನಡೆಸಿದ್ದು, ಮಸ್ಕಿ ಹಾಗೂ ಬೆಂಗಳೂರಿನ ಆರ್‌ಆರ್‌ ನಗರ ಕ್ಷೇತ್ರಗಳಿಗೆ ಏಕೆ ಉಪಚುನಾವಣೆ ಇಲ್ಲ ಎನ್ನುವುದನ್ನು ಮಾಹಿತಿ ನೀಡಿದರು. 

 ಮಸ್ಕಿ ಹಾಗೂ ಆರ್‌ಆರ್‌ ನಗರದ  ವಿಧಾನಸಭೆ ಚುನಾವಣೆಯ ಫಲಿತಾಂಶ ವಿವಾದದಲ್ಲಿದೆ.  ಈ ಎರಡು ಕ್ಷೇತ್ರಗಳ ರಿಸಲ್ಟ್‌ ವಿವಾದ ಕೋರ್ಟ್‌ನಲ್ಲಿ ಕೇಸ್ ನಡೆಯುತ್ತಿದೆ. ಇದರಿಂದ ಮಸ್ಕಿ ಹಾಗೂ ಆರ್‌ಆರ್‌ ನಗರ ಕ್ಷೇತ್ರಗಳಿಗೆ ಉಪಚುನಾವಣೆಗೆ ದಿನಾಂಕ ಘೋಷಣೆ ಮಾಡಿಲ್ಲ ಎಂದು ವಿವರವಾಗಿ ಹೇಳಿದರು.

ಬೈ ಎಲೆಕ್ಷನ್‌ಗೆ ಅನರ್ಹರು ಸ್ಪರ್ಧಿಸಲು ಅವಕಾಶ ಇದ್ಯಾ? ಇಲ್ಲ?: ಸಂಪೂರ್ಣ ಮಾಹಿತಿ

ಆಗಿದ್ದೇನು? 
2018ರಲ್ಲಿ ನಡೆದಿದ್ದ ವಿಧಾನಸಭೆಯಲ್ಲಿ ಮಸ್ಕಿ ಕ್ಷೇತ್ರದಿಂದ ಕಾಂಗ್ರೆಸ್‌ನ ಪ್ರತಾಪ್‌ ಗೌಡ ಪಾಟೀಲ್  ಕೇವಲ 213 ಮತಗಳಿಂದ ಗೆಲುವು ಸಾಧಿಸಿದ್ದರು.  ಚುನಾವಣೆಯಲ್ಲಿ ಅಕ್ರಮವಾಗಿ ಮತದಾನ ಮಾಡಿಸಲಾಗಿದೆ ಎಂದು ಈ ಬಗ್ಗೆ ಬಿಜೆಪಿ ಪರಾಜಿತ ಅಭ್ಯರ್ಥಿ ಆರ್‌. ಬಸವನಗೌಡ ಅವರು ಕೋರ್ಟ್‌ ಮೆಟ್ಟಿಲೇರಿದ್ದು, ಅದು ಹೈಕೋರ್ಟ್‌ನಲ್ಲಿದೆ. ಈ ಹಿನ್ನೆಲೆಯಲ್ಲಿ ಮಸ್ಕಿಗೆ ಉಪಚುನಾವಣೆಗೆ ದಿನಾಂಕ ಘೋಷಣೆ ಮಾಡಿಲ್ಲ.

ಇನ್ನು ಬೆಂಗಳೂರಿನಲ್ಲಿ ಆರ್‌ಆರ್‌ ವಿಧಾನಸಭೆ ಕ್ಷೇತ್ರಕ್ಕೆ ಮುನಿರತ್ನ (ಕಾಂಗ್ರೆಸ್) ಅವರು ಶಾಸಕರಾಗಿದ್ದರು. ಆದ್ರೆ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರಿಂದ  ಅನರ್ಹಗೊಂಡಿದ್ದಾರೆ.  ಚುನಾವಣೆ ವೇಳೆ ಅಕ್ರಮ ಮತದಾರರ ಪಟ್ಟಿ ಸಿಕ್ಕಿದ್ದವು.  ಈ ಪ್ರಕರಣವು  ಸಹ ಕೋರ್ಟ್‌ನಲ್ಲಿದೆ. ಇದ್ರಿಂದ ಆರ್‌ಆರ್‌ ನಗರಕ್ಕೆ ಬೈ ಎಲೆಕ್ಷನ್ ಘೋಷಣೆ ಮಾಡಿಲ್ಲ.

ಉಪಚುನಾವಣೆ ನಡೆಯಲಿರುವ ಕ್ಷೇತ್ರಗಳು
1) ಚಿಕ್ಕಬಳ್ಳಾಪುರ 2) ಮಹಾಲಕ್ಷ್ಮಿ ಲೇಔಟ್ 3) ಹೊಸಕೋಟೆ 4) ಹುಣಸೂರು 5) ಗೋಕಾಕ 6) ಯಶವಂತಪುರ 7) ಅಥಣಿ 8) ಕಾಗವಾಡ 9) ಶಿವಾಜಿನಗರ 10) ಕೆ.ಆರ್.ಪೇಟೆ 11) ಕೆ.ಆರ್.ಪುರಂ 12) ಹಿರೇಕೆರೂರು 13) ರಾಣೆಬೆನ್ನೂರು 14) ವಿಜಯನಗರ 15) ಯಲ್ಲಾಪುರ.

ಮಹತ್ವದ ದಿನಾಂಕಗಳು
ನಾಮಪತ್ರ ಸಲ್ಲಿಕೆ ಅಧಿಸೂಚನೆ - ಸೆಪ್ಟೆಂಬರ್ 23
ನಾಮಪತ್ರ ಸಲ್ಲಿಕೆ ಅಂತ್ಯ - ಸೆಪ್ಟೆಂಬರ್ 30
ನಾಮಪತ್ರ ಪರಿಶೀಲನೆ - ಅಕ್ಟೋಬರ್ 1
ನಾಮಪತ್ರ ವಾಪಸ್: ಅಕ್ಟೋಬರ್.3
ಮತದಾನ ಅಕ್ಟೋಬರ್ 21
ಫಲಿತಾಂಶ ಅಕ್ಟೋಬರ್ 24

click me!