ಬೆಂಗಳೂರು(ಜು. 14) ರಾಜೀನಾಮೆ ಕೊಟ್ಟಿದ್ದ ಎಂಟಿಬಿ ನಾಗರಾಜ್ ಮುಂಬೈ ವಿಮಾನ ಏರಿದ್ದು ಹೊಟೆಲ್ ನಲ್ಲಿ ಅತೃಪ್ತರ ಪಡೆ ಸೇರಿಕೊಂಡಿದ್ದಾರೆ. ಹಾಗಾದರೆ ಎಂಟಿಬಿ ನಾಗರಾಜ್ ಕೊನೆಗೂ ಕೈಕೊಡಲು ಕಾರಣವೇನು?
ಪುತ್ರನ ರಾಜಕಾರಣದ ಭವಿಷ್ಯ: ಲೋಕಸಭಾ ಚುನಾವಣೆ ಫಲಿತಾಂಶ ಸಹಜವಾಗಿಯೇ ರಾಜ್ಯ ಕಾಂಗ್ರೆಸ್ ನಾಯಕರಲ್ಲಿ ನಡುಕ ತಂದಿದ್ದು. ಸುರಕ್ಷಿತ ಪ್ರದೇಶವನ್ನು ಅವರುಸುತ್ತಿದ್ದರು. ತಮ್ಮ ಪುತ್ರನಿಗೆ ಉತ್ತಮ ರಾಜಕೀಯ ಭವಿಷ್ಯ ರೂಪಿಸಲು ಈ ತೀರ್ಮಾನ ತೆಗೆದುಕೊಂಡಿದ್ದಾರೆ ಎನ್ನಲಾಗಿದೆ.
ಇಲಾಖೆಯಲ್ಲಿ ಹಸ್ತಕ್ಷೇಪ: ಲೋಕೋಪಯೋಗಿ ಸಚಿವ ಎಚ್.ಡಿ ರೇವಣ್ಣ ವಿರುದ್ಧ ಕಿಡಿಕಾರಿದ್ದ ಎಂಟಿಬಿ ತಮ್ಮ ಖಾತೆಯಲ್ಲಿ ಬೇರೆಯವರು ಹಸ್ತಕ್ಷೇಪ ಮಾಡುತ್ತಿದ್ದಾರೆ ಎಂದಿದ್ದರು.
ಮೂಲ ಕಾಂಗ್ರೆಸ್ ಕಡೆಗಣನೆ: ಸಮ್ಮಿಶ್ರ ಸರಕಾರಲ್ಲಿ ಮೂಲ ಕಾಂಗ್ರೆಸ್ಸಿಗರ ಕಡೆಗಣನೆ ಮಾಡಲಾಗುತ್ತಿದೆ ಎಂಬ ಮಾತುಗಳು ಕೇಳಿಬಂದಿದ್ದವು. ಹಲವು ಸಂದರ್ಭದಲ್ಲಿ ಇದಕ್ಕೆ ಪೂರಕವಾದ ಬೆಳವಣಿಗೆಗಳು ನಡೆದಿದ್ದವು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.