
ಚಿಕ್ಕಬಳ್ಳಾಪುರ [ಜು.24] : ವಿಶ್ವಾಸಮತ ಯಾಚನೆ ದೊಸ್ತಿ ಸರ್ಕಾರ ಬಹುಮತ ಕಳೆದುಕೊಂಡು ಕೆಳಕ್ಕೆ ಇಳಿದಿದೆ. ಇದಕ್ಕೆ ಕಾರಣರಾದ ಅತೃಪ್ತರಾದ ಎಲ್ಲಾ ಶಾಸಕರ ಅನರ್ಹತೆ ಖಚಿತ ಎಂದು ಕಾಂಗ್ರೆಸ್ ಮುಖಂಡರು ಹೇಳಿದ್ದಾರೆ.
ಇದರ ಬೆನ್ನಲ್ಲೇ ರಾಜ್ಯದಲ್ಲಿ ತ್ರಿಶಂಕು ಆಡಳಿತ ಸ್ಥಿತಿ ನಿರ್ಮಾಣವಾಗಲಿದೆ ಎಂದು ಚಿಕ್ಕಬಳ್ಳಾಪುರ ಶಾಸಕ ಶಿವಶಂಕರ ರೆಡ್ಡಿ ಭವಿಷ್ಯ ನುಡಿದಿದ್ದಾರೆ.
ಅತೃಪ್ತರಾಗಿ ತೆರಳಿ 15 ಮಂದಿ ಪಕ್ಷಕ್ಕೆ ದ್ರೋಹ ಮಾಡಿದ್ದಾರೆ. ಆಂತರಿಕವಾಗಿ ಪಕ್ಷದಲ್ಲೇ ಚರ್ಚಿಸಿ ತಮ್ಮ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳುವ ಅವಕಾಶವಿತ್ತು. ಆದರೆ ರಾಜೀನಾಮೆ ನೀಡಿ ತೆರಳಿ ಪಕ್ಷಕ್ಕೆ ದ್ರೋಹ ಮಾಡಿದ್ದಾರೆ ಎಂದು ಆರೋಪಿಸಿದರು.
ಅಧಿಕಾರ, ಹಣದ ಆಸೆಯಿಂದ ಬಿಜೆಪಿ ಬಲೆಗೆ ಬಿದ್ದಿದ್ದಾರೆ. ಅವರನ್ನು ಮತ್ತೆ ಪಕ್ಷಕ್ಕೆ ಸೇರಿಸಿಕೊಳ್ಳುವ ಪ್ರಶ್ನೆಯೇ ಇಲ್ಲ ಎಂದು ಮಾಜಿ ಕೃಷಿ ಸಚಿವ ಶಿವಶಂಕರ ರೆಡ್ಡಿ ಹೇಳಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.