
ನವದೆಹಲಿ[ಮೇ.25]: ಪ್ರಧಾನಿ ನರೇಂದ್ರ ಮೋದಿ ಅವರ ಅಲೆಯಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರುವಲ್ಲಿ ಯಶಸ್ವಿಯಾಗಿದ್ದರೂ, ಇಬ್ಬರು ಕೇಂದ್ರ ಸಚಿವರು ಮಾತ್ರ ಸೋಲುಕಂಡಿದ್ದಾರೆ.
ಮೋದಿ ಸಂಪುಟದ ಹಿರಿಯ ಸಚಿವರಾದ ಹರ್‌ದೀಪ್ ಪುರಿ ಹಾಗೂ ಕೆ.ಜೆ. ಅಲ್ಫೋನ್ಸ್ ಅವರು ತಮ್ಮ ಕ್ಷೇತ್ರಗಳಲ್ಲಿ ಜಯ ಸಾಧಿಸುವಲ್ಲಿ ವಿಫಲರಾಗಿದ್ದಾರೆ. ಕೇರಳದ ಎರ್ನಾಕುಲಂ ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧೆ ಮಾಡಿದ್ದ ಅಲ್ಫೋನ್ಸ್ ಅವರು ತಮ್ಮ ಎದುರಾಳಿಯಾದ ಸಿಪಿಎಂ ಪಕ್ಷದ ಪಿ. ರಾಜೀವ್ ಅವರಿಂದ 1,84,361 ಮತಗಳ ಅಂತರದಿಂದ ಪರಾಭವಗೊಂಡಿದ್ದಾರೆ.
ಇನ್ನು ಪಂಜಾಬ್‌ನ ಅಮೃತಸರ ಲೋಕಸಭಾ ಕ್ಷೇತ್ರದಿಂದ ಲೋಕಸಭಾ ಅಖಾಡಕ್ಕಿಳಿದಿದ್ದ ಕೇಂದ್ರ ಸಚಿವ ಹರದೀಪ್ ಸಿಂಗ್ ಪುರಿ ಅವರು ಹೀನಾಯ ಸೋಲು ಕಂಡಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಯಾದ ಗುರ್ಜೀತ್ ಸಿಂಗ್ ಔಜಲಾ ಅವರು 1 ಲಕ್ಷ ಮತಗಳ ಅಂತರದಿಂದ ಹರದೀಪ್ ಸಿಂಗ್ ಪುರಿಯನ್ನು ಸೋಲುಣಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.