
ಗದಗ: ಮನೆಯಲ್ಲಿಟ್ಟಿದ್ದ ಶಿಯೋಮಿ ರೆಡ್‌ಮಿ 4ಎ ಸೀರಿಸ್ ಮೊಬೈಲ್ ಸ್ಫೋಟಗೊಂಡು ಸುಟ್ಟು ಕರಕಲಾದ ಘಟನೆ ಶನಿವಾರ ಗದಗ ಜಿಲ್ಲೆಯ ರೋಣ ತಾಲೂಕಿನ ಯರೆಬೇಲೆರಿ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ವೀರೇಶ ಹಿರೇಮಠ ಎಂಬವರು ನಗರದ ಮೊಬೈಲ್ ಅಂಗಡಿಯೊಂದರಲ್ಲಿ ಶಿಯೋಮಿ ರೆಡ್‌ಮಿ ೪ಎ ಸೀರಿಸ್ ಮೊಬೈಲ್ ಖರೀದಿಸಿದ್ದರು. ಮನೆಯ ಟೇಬಲ್ ಮೇಲಿಟ್ಟಿದ್ದಾಗ ಇದ್ದಕ್ಕಿದ್ದಂತೆ ಮೊಬೈಲ್ ಸ್ಫೋಟವಾಗಿದೆ.
ಮೊಬೈಲ್ ಬ್ಯಾಟರಿ, ಅದರ ಒಳಭಾಗ, ಸ್ಪೀಕರ್ ಎಲ್ಲವೂ ಸುಟ್ಟು ಕರಕಲಾಗಿವೆ. ಅದೃಷ್ಟವಶಾತ್ ಯಾವುದೇ ಜೀವಾಪಾಯ ಸಂಭವಿಸಿಲ್ಲ. ಈ ಘಟನೆಯಿಂದ ಕುಟುಂಬದವರು ಬೆಚ್ಚಿ ಬಿದ್ದಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.