
ಭೋಪಾಲ್: ಯಾವುದೇ ಅಧಿಕೃತ ಸಂವಹನದಲ್ಲಿ ದಲಿತ ಪದ ಬಳಸದಂತೆ ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಮಧ್ಯಪ್ರದೇಶ ಹೈಕೋರ್ಟ್ ನಿರ್ದೇಶಿಸಿದೆ.
ಸಂವಿಧಾನದಲ್ಲಿ ದಲಿತ ಎಂಬ ಪದದ ಉಲ್ಲೇಖ ಇಲ್ಲದಿರುವುದೇ ಈ ನಿರ್ದೇಶನಕ್ಕೆ ಕಾರಣ. ದಲಿತ ಪದದ ಬದಲಿಗೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಎಂಬ ಪದ ಬಳಸುವಂತೆ ಹೈಕೋರ್ಟ್ ಸೂಚಿಸಿದೆ.
ಪರಿಶಿಷ್ಟರ ಅಪಮಾನಕ್ಕಾಗಿ ಮೇಲ್ಜಾತಿಯವರು ಅವಹೇಳನಕಾರಿಯಾದ ದಲಿತ ಎಂಬ ಪದ ಬಳಸುತ್ತಾರೆ ಎಂದು ಸಾಮಾಜಿಕ ಕಾರ್ಯಕರ್ತ ಮೋಹನ್ ಲಾಲ್ ಎಂಬುವರು ಪಿಐಎಲ್ ಸಲ್ಲಿಸಿದ್ದರು. ಈ ವೇಳೆ ಕೋರ್ಟ್ ಈ ಆದೇಶ ಹೊರಡಿಸಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.