ಅಯ್ಯಪ್ಪ ದೇಗುಲ ಪ್ರವೇಶಕ್ಕೆ ಯತ್ನಿಸಿದ ರೆಹನಾಗೆ ಸಂಕಷ್ಟ

By Web DeskFirst Published Oct 22, 2018, 11:17 AM IST
Highlights

ಅಯ್ಯಪ್ಪ ಸ್ವಾಮಿ ದೇಗುಲ ಪ್ರವೇಶಿಸಲು ಯತ್ನಿಸಿದ್ದ ಮುಸ್ಲಿಂ ಮಹಿಳೆ ರೆಹನಾ ಫಾತಿಮಾಗೆ ಇದೀಗ ಸಂಕಷ್ಟ ಒಂದು ಎದುರಾಗಿದೆ. 

ಕೊಚ್ಚಿ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇಗುಲ ಪ್ರವೇಶಿಸಲು ಯತ್ನಿಸಿ ಸುದ್ದಿಯಾಗಿದ್ದ ಕೇರಳದ ಬಿಎಸ್‌ಎನ್‌ಎಲ್ ಉದ್ಯೋಗಿ ಹಾಗೂ ಹೋರಾಟಗಾರ್ತಿ ರೆಹನಾ ಫಾತಿಮಾ ಅವರನ್ನು ಮುಸ್ಲಿಂ ಸಮುದಾಯದ ಉಚ್ಚಾಟಿಸಿದೆ. 

ಅಯ್ಯಪ್ಪ ದೇಗುಲ ಪ್ರವೇಶಿಸಲು ಪ್ರಯತ್ನಿಸುವ ಮೂಲಕ ಲಕ್ಷಾಂತರ ಹಿಂದು ಭಕ್ತರ ಭಾವನೆಗಳಿಗೆ ಘಾಸಿಗೊಳಿಸಿದ ಕಾರಣಕ್ಕೆ ರೆಹನಾ ಫಾತಿಮಾ ಹಾಗೂ ಆಕೆಯ ಕುಟುಂಬವನ್ನು ಅವರನ್ನುಸಮುದಾಯದಿಂದ ಬಹಿಷ್ಕರಿಸಲಾಗಿದೆ ಎಂದು ಕೇರಳ ಮುಸ್ಲಿಂ ಜಮಾತ್ ಕೌನ್ಸಿಲ್ ತಿಳಿಸಿದೆ. 

‘ಕಿಸ್ ಆಫ್ ಲವ್’ ಕಾರ್ಯಕ್ರಮದಲ್ಲೂ ಭಾಗಿಯಾಗಿದ್ದ ರೆಹನಾ, ಬೆತ್ತಲೆಯಾಗಿ ಸಿನಿಮಾವೊಂದರಲ್ಲಿ ಕಾಣಿಸಿಕೊಂಡಿದ್ದರು. ಅಯ್ಯಪ್ಪ ಸನ್ನಿಧಿಯಿಂದ 500 ಮೀಟರ್ ದೂರದವರೆಗೆ ಪತ್ರಕರ್ತೆ ಜತೆ ಪೊಲೀಸ್ ರಕ್ಷಣೆಯಲ್ಲಿ ತೆರಳಿದ್ದರು. ಅರ್ಚಕರ ಪ್ರತಿಭಟನೆ ಹಾಗೂ ಪೊಲೀಸರ
ಅಸಹಾಯಕತೆ ಹಿನ್ನೆಲೆಯಲ್ಲಿ ವಾಪಸಾಗಿದ್ದರು. ದೇಗುಲ ಪ್ರವೇಶಕ್ಕೆ ಯತ್ನಿಸಿದ ಅವರ ನಿವಾಸದ ಮೇಲೆ ದಾಳಿ ನಡೆದಿತ್ತು.

click me!