
ಭೋಪಾಲ್ (ನ.01): ಪೊಲೀಸ್ ಎನ್‌ಕೌಂಟರ್‌ನಲ್ಲಿ ಹತರಾಗಿರುವ 8 ಶಂಕಿತ ಸಿಮಿ ಉಗ್ರರ ಕುಟುಂಬಸ್ಥರು ಪ್ರಕರಣವನ್ನು ಸಿಬಿಐಗೆ ವಹಿಸಬೇಕೆಂದು ಮಧ್ಯ ಪ್ರದೇಶ ಹೈಕೋರ್ಟ್ ಮೊರೆ ಹೋಗಲು ನಿರ್ಧರಿಸಿದ್ದಾರೆ.
ಎನ್‌ಕೌಂಟರ್ ಹೆಸರಿನಲ್ಲಿ ನಿರ್ದಯವಾಗಿ ತಮ್ಮವರನ್ನು ಹತ್ಯೆ ಮಾಡಲಾಗಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.
ಎನ್‌ಕೌಂಟರ್‌ನಲ್ಲಿ ಹತರಾಗಿರುವ ತಮ್ಮವರಿಗೆ ನ್ಯಾಯ ಒದಗಿಸಿ ಕೊಡುವಂತೆ ಮೃತಪಟ್ಟವರ ಕುಟುಂಬಸ್ಥರು ನನ್ನ ಬಳಿ ಬಂದಿದ್ದರು. ಇದರಿಂದ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಮಧ್ಯ ಪ್ರದೇಶ ಹೈಕೋರ್ಟ್‌ಗೆ ಮೊರೆ ಹೋಗುವುದಾಗಿ ವಕೀಲ ಪರ್ವೆಜ್ ಅಲಮ್ ತಿಳಿಸಿದ್ದಾರೆ.
32 ಅಡಿ ಎತ್ತರದ ಜೈಲಿನಿಂದ ತಪ್ಪಿಸಿಕೊಂಡು ಬರುವುದು ಸಾಧ್ಯವೆ?. ಅಲ್ಲದೆ ಈ ಎನ್‌ಕೌಂಟರ್ ಶುದ್ಧ ಸುಳ್ಳು. ಹಾಗಾಗಿ ಇದು ನಕಲಿ ಎನ್‌ಕೌಂಟರ್ ಎಂದು ಅಲಮ್ ಆರೋಪಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.