ಯುಗಾದಿ ಹಬ್ಬಕ್ಕೂ ಮುನ್ನ ರಾಜ್ಯದಲ್ಲಿ ಮಳೆಯ ಸಿಂಚನ

By Suvarna Web DeskFirst Published Mar 13, 2018, 7:36 PM IST
Highlights

ರಾಜ್ಯಧಾನಿ ಬೆಂಗಳೂರಲ್ಲೂ ಸಹ ಚದುರಿದಂತೆ ಮಳೆಯಾಗುವ ಸಾಧ್ಯತೆಯಿದೆ

ಬೆಂಗಳೂರು(ಮಾ.13): ಅರಬ್ಬಿ ಸಮುದ್ರ ದಕ್ಷಿಣ ಭಾಗದಲ್ಲಿ ವಾಯು ಭಾರ ಕುಸಿತ ಹಿನ್ನಲೆಯಲ್ಲಿ  ತಮಿಳುನಾಡು ಹಾಗೂ ಕೇರಳದಲ್ಲಿ ಹೆಚ್ಚಿನ ಮಳೆಯಾಗಲಿದೆ. ರಾಜ್ಯದಲ್ಲಿ ನಾಲ್ಕೈದು ದಿನ ಸಾಧಾರಣ ಮಳೆಯಾಗಲಿದೆ ನಾಳೆ ಅಥವಾ ನಾಡಿದ್ದು ರಾಜ್ಯದ ವಿವಿಧ ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ.

ಪ್ರಮುಖವಾಗಿ ಕರಾವಳಿ,ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ಭಾಗದಲ್ಲಿ ಮಳೆಯಾಗುವ ಸಂಭವವಿಧೆ. ರಾಜ್ಯಧಾನಿ ಬೆಂಗಳೂರಲ್ಲೂ ಚದುರಿದಂತೆ ಮಳೆಯಾಗುವ ಸಾಧ್ಯತೆಯಿದೆ. ಅಲ್ಲದೇ ರಾಜ್ಯದಲ್ಲಿ ಒಂದುವಾರ ಮಟ್ಟಿಗೆ ಉಷ್ಣಾಂಶ ತಗ್ಗಲಿದೆ ರಾಜ್ಯದಲ್ಲಿ ವಿವಿಧ ಭಾಗದಲ್ಲಿ 3 ರಿಂದ 4 ಡಿಗ್ರಿಯಷ್ಟು ಉಷ್ಣಾಂಶ ಕಡಿಮೆಯಾಗಲಿದೆ ಎಂದು ಸುವರ್ಣ ನ್ಯೂಸ್’ಗೆ ರಾಜ್ಯ ನೈಸರ್ಗಿಕ ವಿಕೋಪ ಕೇಂದ್ರದ ನಿರ್ದೇಶಕರಾದ ಶ್ರೀನಿವಾಸ ರೆಡ್ಡಿ ತಿಳಿಸಿದ್ದಾರೆ.

 

click me!