
ಬೆಳಗಾವಿ(ಜ.04): ಬೆಳಗಾವಿ ಮಹಾನಗರ ಪಾಲಿಕೆ ಮೇಯರ್ ಪಟ್ಟ ಈ ಬಾರಿ ಕನ್ನಡಿಗರ ಪಾಲಿಗೆ ಒಲಿದು ಬಂದಿದೆ. ಮೇಯರ್, ಉಪಮೇಯರ್ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಮೀಸಲಾತಿ ಪ್ರಕಟಿಸಿದ್ದು, ಮೇಯರ್ ಸ್ಥಾನ ಪರಿಶಿಷ್ಟ ಪಂಗಡ (ಎಸ್‌ಟಿ) ಮತ್ತು ಉಪಮೇಯರ್ ಸ್ಥಾನ ಬಿಸಿಎ ಮಹಿಳಾ ಮೀಸಲಾತಿ ನೀಡಿ ಆದೇಶ ಹೊರಡಿಸಿದೆ.
ಪಾಲಿಕೆಯ ಆಡಳಿತದ ಚುಕ್ಕಾಣಿ ಮರಾಠಿಗರ ಹಿಡಿತದಲ್ಲಿದೆ. ಏನೇ ಇದ್ದರೂ ಇಲ್ಲಿ ಪಕ್ಷ ಗೌಣ. ಇಲ್ಲಿ ಗಡಿ ವಿವಾದ, ಭಾಷೆ, ಗುಂಪುಗಾರಿಕೆ ರಾಜಕೀಯ ನಡೆಯುತ್ತದೆ. ಒಟ್ಟು 58 ಸದಸ್ಯರ ಬಲ ಹೊಂದಿರುವ ಸದಸ್ಯರ ಪೈಕಿ ಕನ್ನಡಿಗ, ವಾರ್ಡ್ ನಂ.55ರ ಸದಸ್ಯ ಬಸಪ್ಪ ಚಿಕ್ಕಲದಿನ್ನಿ ಅವರೊಬ್ಬರೇ ಎಸ್‌ಟಿ ಅಭ್ಯರ್ಥಿಯಾಗಿರುವುದರಿಂದ ನಿರಾಯಾಸವಾಗಿ ಅವರಿಗೆ ಮೇಯರ್ ಪಟ್ಟ ಒಲಿದು ಬಂದಿದೆ. ಇದು ಸಹಜವಾಗಿಯೇ ಕನ್ನಡಪರ ಸಂಘಟನೆಗಳ ಸಂತಸಕ್ಕೆ ಕಾರಣವಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.