ಶೇ.75 ರಷ್ಟು ಮೀಸಲಾತಿ ಪರ ಕೇಂದ್ರ ಸಚಿವ ಅಠವಾಳೆ ಬ್ಯಾಟಿಂಗ್!

Published : Oct 13, 2018, 06:19 PM IST
ಶೇ.75 ರಷ್ಟು ಮೀಸಲಾತಿ ಪರ ಕೇಂದ್ರ ಸಚಿವ ಅಠವಾಳೆ ಬ್ಯಾಟಿಂಗ್!

ಸಾರಾಂಶ

ಮೀಸಲಾತಿ ಪ್ರಮಾಣ ಹೆಚ್ಚಳಕ್ಕೆ ರಾಮದಾಸ್ ಅಠವಾಳೆ ಆಗ್ರಹ! ಶೇ.50 ರಿಂದ ಶೇ.75 ಕ್ಕೆ ಮೀಸಲಾತಿ ಹೆಚ್ಚಳಕ್ಕೆ ಕೇಂದ್ರ ಸಚಿವ ಒತ್ತಾಯ! ಸರ್ಕಾರಿ ಉದ್ಯೋಗದಲ್ಲಿ ಮೀಸಲಾತಿ ಹೆಚ್ಚಳಕ್ಕೆ ಅಠವಾಳೆ ಆಗ್ರಹ! ರಾಜ್ಯ ಸರ್ಕಾರಗಳಿಗೆ ಮನವಿ ಮಾಡಿದ ರಾಮದಾಸ್ ಅಠವಾಳೆ 

ನವದೆಹಲಿ(ಅ.13): ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೇ ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ರಾಜ್ಯ ಸಚಿವ ರಾಮದಾಸ್ ಅಠವಾಳೆ ಅವರಿಗೆ ಮತ್ತೆ ಮೀಸಲಾತಿ ನೆನಪಾದಂತಿದೆ. ಸರ್ಕಾರಿ ನೌಕರಿಗಳಲ್ಲಿ ಎಸ್‌ಸಿ ಎಸ್‌ಟಿ ಮೀಸಲಾತಿಯನ್ನು ಶೇ.50 ರಿಂದ ಶೇ.75ಕ್ಕೆ ಹೆಚ್ಚಿಸಬೇಕು ಎಂದು ಅಠವಾಳೆ ಆಗ್ರಹಿಸಿದ್ದಾರೆ.

ಈ ಕುರಿತು ಮಾತನಾಡಿರುವ ಅಠವಾಳೆ, ಸರ್ಕಾರಿ ನೌಕರಿಗಳಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಇರುವ ಮೀಸಲಾತಿ ಪ್ರಮಾಣವನ್ನು ರಾಜ್ಯ ಸರ್ಕಾರಗಳು ಹೆಚ್ಚಿಸಬೇಕು ಎಂದು ಒತ್ತಾಯಿಸಿದ್ದಾರೆ. 

ಮೀಸಲಾತಿಗಾಗಿ ಈಗಾಗಲೇ ಹಲವು ವರ್ಗಗಳು ಆಗ್ರಹಿಸುತ್ತಿದ್ದು, ಇದರಿಂದ ಪ್ರಸಕ್ತ ಮೀಸಲಾತಿ ನೀತಿ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ಅಠವಾಳೆ ಅಭಿಪ್ರಾಯಪಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಈಗಿರುವ ಮೀಸಲಾತಿ ಪ್ರಮಾಣವನ್ನು ಹೆಚ್ಚಿಸಿ ಶೋಷಿತ ವರ್ಗವನ್ನು ಮೇಲೆತ್ತುವ ಕಾರ್ಯ ಆಗಬೇಕಿದೆ ಎಂದು ಅವರು ಹೇಳಿದ್ದಾರೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ವಿಡಿಯೋ: ಅಂತರರಾಷ್ಟ್ರೀಯ ವೇದಿಕೆಯಲ್ಲಿ ಪಾಕಿಸ್ತಾನಕ್ಕೆ ಅವಮಾನ: ಶಹಬಾಜ್ ಷರೀಫ್‌ರನ್ನು ನಿರ್ಲಕ್ಷಿಸಿದ ಪುಟಿನ್!
ಯುಎಇ ಕಠಿಣ ಕಾನೂನು: ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ, ವೇಶ್ಯಾವಾಟಿಕೆಗೆ ಶಿಕ್ಷೆ ಪ್ರಮಾಣ ಭಾರೀ ಹೆಚ್ಚಳ!