ರಾಷ್ಟ್ರ ರಾಜಕಾರಣದಲ್ಲಿ ಸಂಚಲನ : ಬೆಂಗಳೂರಿನತ್ತ ಗುಜರಾತ್'ನ 45 ಶಾಸಕರು

By Suvarna Web DeskFirst Published Jul 28, 2017, 9:00 PM IST
Highlights

ರಾಜ್ಯಸಭೆ ಚುನಾವಣೆಯಲ್ಲಿ  ಕಾಂಗ್ರಸ್'ನ ಪ್ರಧಾನ ಕಾರ್ಯದರ್ಶಿ ಅಹ್ಮದ್ ಪಟೇಲ್ ಅವರನ್ನು ಗೆಲ್ಲಿಸಲು ಕಾಂಗ್ರೆಸ್ ಹರಸಾಹಸ ಪಡುತ್ತಿದ್ದು, ಈ ಹಿನ್ನಲೆಯಲ್ಲಿ ಬೆಂಗಳೂರಿಗೆ ಶಾಸಕರನ್ನ ಕರೆತಂದು ಕುದುರೆ ವ್ಯಾಪಾರ ತಪ್ಪಿಸಲು ಕಾಂಗ್ರೆಸ್ ಹೈಕಮಾಂಡ್ ಈ ಪ್ಲಾನ್ ಮಾಡಿದೆ.

ಬೆಂಗಳೂರು(ಜು.28): ರಾಷ್ಟ್ರ ರಾಜಕಾರಣದಲ್ಲಿ ಸಂಚಲನ ಶುರುವಾಗಿದೆ. ರಾಜ್ಯಸಭೆ ಚುನಾವಣೆ ಹಿನ್ನಲೆಯಲ್ಲಿ ಆಮಪೇಷನ್ ಕಮಲದ ಭೀತಿಯಲ್ಲಿ ಗುಜರಾತ್'ನ 40 ಕಾಂಗ್ರೆಸ್ ಶಾಸಕರು ಇಂದು ರಾತ್ರಿ ಬೆಂಗಳೂರಿನತ್ತ ಆಗಮಿಸುತ್ತಿದ್ದಾರೆ. ನಗರದ ಹೊರವಲಯದಲ್ಲಿರುವ ರೆಸಾರ್ಟ್'ವೊಂದರಲ್ಲಿ ಶಾಸಕರು ವಾಸ್ತವ್ಯ ಹೂಡಲಿದ್ದಾರೆ.

ಕುದುರೆ ವ್ಯಾಪಾರ ತಡೆಯಲು  ಬೆಂಗಳೂರಿನಲ್ಲಿ ರೆಸಾರ್ಟ್ ರಾಜಕಾರಣ ಶುರುವಾಗಿದೆ.ರಾಜ್ಯಸಭೆ ಚುನಾವಣೆಯಲ್ಲಿ  ಕಾಂಗ್ರಸ್'ನ ಪ್ರಧಾನ ಕಾರ್ಯದರ್ಶಿ ಅಹ್ಮದ್ ಪಟೇಲ್ ಅವರನ್ನು ಗೆಲ್ಲಿಸಲು ಕಾಂಗ್ರೆಸ್ ಹರಸಾಹಸ ಪಡುತ್ತಿದ್ದು, ಈ ಹಿನ್ನಲೆಯಲ್ಲಿ ಬೆಂಗಳೂರಿಗೆ ಶಾಸಕರನ್ನ ಕರೆತಂದು ಕುದುರೆ ವ್ಯಾಪಾರ ತಪ್ಪಿಸಲು ಕಾಂಗ್ರೆಸ್ ಹೈಕಮಾಂಡ್ ಈ ಪ್ಲಾನ್ ಮಾಡಿದೆ.

Latest Videos

2000ರಲ್ಲಿಯೂ ರಾಜ್ಯದಲ್ಲಿ ಇದೇ ರೀತಿಯ ಬೆಳವಣಿಗೆ ನಡೆದಿತ್ತು. ಮಹಾರಾಷ್ಟ್ರದಲ್ಲಿ ದಿ.ವಿಲಾಸ್ ರಾವ್ ದೇಶಮುಖ್ ಮುಖ್ಯಮಂತ್ರಿಯಾಗಿದ್ದಾಗ ಕಾಂಗ್ರೆಸ್ ಶಾಸಕರು ಕರ್ನಾಟಕಕ್ಕೆ ಆಗಮಿಸಿದ್ದರು. ಆಗ ಎಸ್.ಎಂ. ಕೃಷ್ಣ ಸಿಎಂ ಆಗಿದ್ದರು. ಶಾಸಕರ ಉಸ್ತುವಾರಿಯನ್ನು ಸಚಿವ ಡಿ.ಕೆ. ಶಿವಕುಮಾರ್ ವಹಿಸಿಕೊಂಡಿದ್ದರು. ಈಗಲೂ ಶಿವಕುಮಾರ್ ಅವರೇ ವಹಿಸಿಕೊಂಡಿದ್ದಾರೆ. ಗುಜರಾತ್'ನಲ್ಲಿ ಇತ್ತೀಚಿಗಷ್ಟೆ 6 ಕಾಂಗ್ರೆಸ್ ಶಾಸಕರು ಬಿಜೆಪಿಗೆ ಸೇರ್ಪಡೆಗೊಂಡಿದ್ದರು.

(ಸಾಂದರ್ಭಿಕ )

click me!