ರೆಸ್ಟೋರೆಂಟಲ್ಲಿ ಬಾಟಲ್ ನೀರಿಗೆ ಎಂಆರ್‌ಪಿ ಇಲ್ಲ

By Suvarna Web DeskFirst Published Dec 13, 2017, 1:44 PM IST
Highlights

ಹೋಟೆಲ್ ಮತ್ತು ರೆಸ್ಟೋರೆಂಟ್‌ಗಳಲ್ಲಿ ಮಿನರಲ್ ವಾಟರ್ ಬಾಟಲ್‌ಗಳನ್ನು ಗರಿಷ್ಠ ಮಾರಾಟ ಬೆಲೆಗೇ ಮಾರಾಟ ಮಾಡಬೇಕಾದ ಅನಿವಾರ್ಯತೆಯಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ನವದೆಹಲಿ: ಹೋಟೆಲ್ ಮತ್ತು ರೆಸ್ಟೋರೆಂಟ್‌ಗಳಲ್ಲಿ ಮಿನರಲ್ ವಾಟರ್ ಬಾಟಲ್‌ಗಳನ್ನು ಗರಿಷ್ಠ ಮಾರಾಟ ಬೆಲೆಗೇ ಮಾರಾಟ ಮಾಡಬೇಕಾದ ಅನಿವಾರ್ಯತೆಯಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ಹೋಟೆಲ್ ಮತ್ತು ರೆಸ್ಟೋರೆಂಟ್‌ಗಳಲ್ಲಿ ನೀರು ಬಾಟಲುಗಳನ್ನು ಮಾರಾಟ ಮಾಡುವುದಕ್ಕೆ ಕಾನೂನು ಮಾಪನಶಾಸ್ತ್ರ ಕಾಯ್ದೆಯ ನಿಯಮ ಅನ್ವಯವಾಗುವುದಿಲ್ಲ, ಹೀಗಾಗಿ ಎಂಆರ್‌ಪಿಗಿಂತ ಹೆಚ್ಚು ಬೆಲೆಯಲ್ಲಿ ಮಾರಾಟ ಮಾಡಿದಲ್ಲಿ, ಅವುಗಳ ವಿರುದ್ಧ ಕ್ರಮ ಕೈಗೊಳ್ಳುವಂತಿಲ್ಲ ಎಂದು ನ್ಯಾಯಪೀಠ ತಿಳಿಸಿದೆ.

ಹೋಟೆಲ್, ವ್ಯಾಪಾರ ಮತ್ತು ಸೇವೆ ಎರಡನ್ನೂ ಒಳಗೊಂಡಿರುತ್ತದೆ. ವಾಣಿಜ್ಯ ಉದ್ದೇಶದಿಂದ ಆ ಸ್ಥಳವನ್ನು ಅಭಿವೃದ್ಧಿಪಡಿಸಲಾಗಿರುತ್ತದೆ. ಹೀಗಾಗಿ ಅಲ್ಲಿ ಹೆಚ್ಚಿನ ದರಕ್ಕೆ ಮಾರಾಟ ಮಾಡುವುದು ತಪ್ಪಲ್ಲ ಎಂದು ಕೋರ್ಟ್‌ ಹೇಳಿದೆ.

ರೆಸ್ಟೋರೆಂಟ್‌ಗಳಲ್ಲಿ ಮಿನರಲ್ ನೀರು ಬಾಟಲುಗಳನ್ನು ಮಾರಾಟ ಮಾರುವುದಕ್ಕೆ ಕಾಯ್ದೆಯ ನಿಯಮ ಪಾಲನೆ ಕಡ್ಡಾಯ. ಎಂಆರ್‌ಪಿಗಿಂತ ಹೆಚ್ಚಿನ ದರಕ್ಕೆ ಮಾರಿದರೆ ಜೈಲು ಶಿಕ್ಷೆ ವಿಧಿಸಲಾಗುತ್ತದೆ ಎಂಬ ಕೇಂದ್ರದ ವಾದವನ್ನು ಕೋರ್ಟ್ ತಳ್ಳಿ ಹಾಕಿದೆ.

click me!