
ಶ್ರೀನಗರ[ಆ.19]: ಜಮ್ಮು- ಕಾಶ್ಮೀರದ ವಿಶೇಷ ಸ್ಥಾನಮಾನ ರದ್ದಾದ ಹಿನ್ನೆಲೆಯಲ್ಲಿ ಕಳೆದ ಎರಡು ವಾರಗಳಿಂದ ಹೇರಿದ್ದ ನಿರ್ಬಂಧ ಸಡಿಲಿಸಿದ ಬೆನ್ನಲ್ಲೇ, ಶ್ರೀನಗರದ ಕೆಲವೆಡೆ ಭಾನುವಾರ ಹೊಸದಾಗಿ ಹಿಂಸಾಚಾರ ಕಾಣಿಸಿಕೊಂಡಿದೆ. ಪ್ರತಿಭಟನೆಯ ವೇಳೆ ಅನೇಕ ಮಂದಿ ಗಾಯಗೊಂಡಿದ್ದಾರೆ.
ಈ ಹಿನ್ನೆಲೆಯಲ್ಲಿ ಶ್ರೀನಗರದಲ್ಲಿ ನಿರ್ಬಂಧವನ್ನು ಮರು ಹೇರಿಕೆ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಮಧ್ಯೆ 300 ಹಜ್ ಯಾತ್ರಿಕರಿದ್ದ ವಿಮಾನ ಶ್ರೀನಗರ ವಿಮಾನ ನಿಲ್ದಾಣದಲ್ಲಿ ಭಾನುವಾರ ಮುಂಜಾನೆ ಬಂದಿಳಿದಿದ್ದು, ಯಾತ್ರಿಕರು ತಮ್ಮ ಮನೆಗಳಿಗೆ ತೆರಳಲು ಹೆಚ್ಚಿನ ಭದ್ರತೆ ಕಲ್ಪಿಸಲಾಗಿತ್ತು.
ಮತ್ತೆ ಇಂಟರ್‌ನೆಟ್ ಬಂದ್:
ಸಾಮಾಜಿಕ ಜಾಲತಾಣಗಳಲ್ಲಿ ಹಬ್ಬಿಸುತ್ತಿರುವ ಸುಳ್ಳು ಸುದ್ದಿಗೆ ಕಡಿವಾಣ ಹಾಕುವ ನಿಟ್ಟಿನಿಂದ ಜಮ್ಮು- ಕಾಶ್ಮೀರದಲ್ಲಿ ಮತ್ತೆ ಇಂಟರ್‌ನೆಟ್ ಸೇವೆಯನ್ನು ಬಂದ್ ಮಾಡಲಾಗಿದೆ. ಎರಡು ದಿನದ ಹಿಂದಷ್ಟೇ ಜಮ್ಮು- ಕಾಶ್ಮೀರದ 5 ಜಿಲ್ಲೆಗಳಲ್ಲಿ 2 ಜಿ. ಸೇವೆಯನ್ನು ಒದಗಿಸಲಾಗಿತ್ತು. ಆದರೆ, ಸುದ್ದಿ ಹಬ್ಬಿಸಲು ಇಂಟರ್‌ನೆಟ್ ದುರ್ಬಳಕೆ ಆಗುತ್ತಿರುವುದು ಗಮನಕ್ಕೆ ಬಂದಿದೆ. ಸುಳ್ ಸುದ್ದಿ ಹಬ್ಬಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಮ್ಮು ಪೊಲೀಸ್ ಮಹಾ ನಿರ್ದೇಶಕ ಮುಕೇಶ್ ಸಿಂಗ್ ಎಚ್ಚರಿಕೆ ನೀಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.