ಜಮ್ಮುವಿನಲ್ಲಿ ನಿಷೇಧಾಜ್ಞೆ ಹಿಂಪಡೆತ: ಕಾಶ್ಮೀರದಲ್ಲಿ ಅವ್ಯಾಹತ!

By Web Desk  |  First Published Aug 14, 2019, 3:50 PM IST

ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಹಿಂಪಡೆತ| ಕಣಿವೆಯಲ್ಲಿ ವಿಧಿಸಲಾಗಿದ್ದ ನಿಷೇಧಾಜ್ಞೆ ಸಡಲಿಸಿದ ಸರ್ಕಾರ| ಜಮ್ಮುವಿನಲ್ಲಿ ನಿಷೇಧಾಜ್ಞೆ ಸಂಪೂರ್ಣ ಹಿಂಪಡೆತ| ಕಾಶ್ಮೀರದ ಕೆಲವೆಡೆ ನಿಷೇಧಾಜ್ಞೆ ಮುಂದುವರಿಕೆ| ಅಹಿತಕರ ಘಟನೆ ನಡೆದಿಲ್ಲ ಎಂದು ಪೊಲೀಸ್ ಇಲಾಖೆ ಸ್ಪಷ್ಟನೆ|


ಶ್ರೀನಗರ(ಆ.14): ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನವನ್ನು ಹಿಂಪಡೆದ ಬಳಿಕ ಕಣಿವೆಯಲ್ಲಿ ಹೇರಲಾಗಿದ್ದ ನಿಷೇಧಾಜ್ಞೆಯನ್ನು ಸಡಿಸಲಾಗಿದೆ.

ಜಮ್ಮುವಿನಲ್ಲಿ ನಿಷೇಧಾಜ್ಞೆಯನ್ನು ಸಂಪೂರ್ಣವಾಗಿ ಹಿಂಪಡೆಯಲಾಗಿದ್ದು, ಕಾಶ್ಮೀರದ ಕೆಲವೆಡೆ ಮಾತ್ರ ನಿಷೇಧಾಜ್ಞೆಯನ್ನು ಮುಂದುವರೆಸಲಾಗಿದೆ.

Tap to resize

Latest Videos

undefined

ವಿಶೇಷ ಸ್ಥಾನಮಾನ ಹಿಂಪಡೆದಿದ್ದನ್ನು ವಿರೋಧಿಸಿ ಕಾಶ್ಮೀರದ ಕೆಲವೆಡೆ ಮಾತ್ರ ಪ್ರತಿಭಟನೆ ನಡೆದಿದ್ದು, ಹಿಂಸಾಚಾರ ನಡೆದಿಲ್ಲ ಎಂದು ರಾಜ್ಯ ಪೊಲೀಸ್ ಇಲಾಖೆ ಸ್ಪಷ್ಟನೆ ನೀಡಿದೆ. 

ಜಮ್ಮು-ಕಾಶ್ಮೀರದ ಪರಿಸ್ಥಿತಿ ಸಂಪೂರ್ಣ ನಿಯಂತ್ರಣದಲ್ಲಿದ್ದು, ಎಲ್ಲಿಯೂ ಅಹಿತಕರ ಘಟನೆಗಳು ನಡೆದಿಲ್ಲ ಎಂದು ಹೆಚ್ಚುವರಿ ಪೊಲೀಸ್ ನಿರ್ದೇಶಕ ಮುನೀರ್ ಖಾನ್ ಹೇಳಿದ್ದಾರೆ. 

click me!