ಕೊನೆಗೂ ಕರ್ನಾಟಕ ಲೋಕಸೇವಾ ಆಯೋಗ ಅಧ್ಯಕ್ಷರ ನೇಮಕ

By Web DeskFirst Published Aug 18, 2019, 8:43 PM IST
Highlights

ಈ ಹಿಂದಿನ ಮೈತ್ರಿ ಸರ್ಕಾರದಲ್ಲಿನ  ಗೊಂದಲದಿಂದಾಗಿ ನನೆಗುದಿಗೆ ಬಿದ್ದಿದ್ದ ಕೆಪಿಎಸ್‌ಸಿ ಅಧ್ಯಕ್ಷರ ನೇಮಕವಾಗಿದೆ. ನಿವೃತ್ತ ಐಎಎಸ್ ಅಧಿಕಾರಿ ಎಸ್.ಪಿ. ಷಡಕ್ಷರಿ ಸ್ವಾಮಿ  ಅವರನ್ನು ಕೆಪಿಎಸ್‌ಸಿ ಅಧ್ಯಕ್ಷನ್ನಾಗಿ ನೇಮಕ ಮಾಡಲಾಗಿದೆ.

ಬೆಂಗಳೂರು, [ಆ.18] : ಕರ್ನಾಟಕ ಲೋಕಸೇವಾ ಆಯೋಗದ(ಕೆಪಿಎಸ್‌ಸಿ) ನೂತನ ಅಧ್ಯಕ್ಷರನ್ನಾಗಿ ನಿವೃತ್ತ ಐಎಎಸ್ ಅಧಿಕಾರಿ ಎಸ್.ಪಿ. ಷಡಕ್ಷರಿ ಸ್ವಾಮಿ ನೇಮಕವಾಗಿದ್ದಾರೆ.

ರಾಜ್ಯ ಸರ್ಕಾರದ ಶಿಫಾರಸಿನ ಅನ್ವಯ ರಾಜ್ಯಪಾಲ ವಾಜುಭಾಯಿ ವಾಲಾ ಅವರು ನೂತನ ಅಧ್ಯಕ್ಷರ ನೇಮಕ ಮಾಡಿ ಆದೇಶ ಹೊರಡಿಸಿದರು.

ಸಿದ್ದರಾಮಯ್ಯ ಸರ್ಕಾರದ ಅವಧಿಯಲ್ಲಿ ಕೆಪಿಎಸ್‌ಸಿ ಅಧ್ಯಕ್ಷರಾಗಿದ್ದ ಶ್ಯಾಮ್ ಭಟ್ ಅವರ ಆವಧಿ ಕಳೆದ ಡಿಸೆಂಬರ್ ನಲ್ಲಿ ಮುಕ್ತಾಯವಾಗಿದ್ದು ಅಲ್ಲಿಂದೀಚೆಗೆ ಅಧ್ಯಕ್ಷ ಪದವಿ ಖಾಲಿಯಾಗಿಯೇ ಉಳಿದಿತ್ತು. 

ಆ ಬಳಿಕ ಅಧಿಕಾರಕ್ಕೇರಿದ ಕುಮಾರಸ್ವಾಮಿ ಅವರ ಸಮ್ಮಿಶ್ರ ಸರ್ಕಾರ, ಷಡಕ್ಷರಿ ಸ್ವಾಮಿ ಅವರನ್ನು ಹಂಗಾಮಿ ಅಧ್ಯಕ್ಷರನ್ನಾಗಿ ನೇಮಕ ಮಾಡಿತ್ತು. ಇದೀಗ ಅವರೇ ಅಧ್ಯಕ್ಷರಾಗಿ ನೇಮಕವಾಗಿದ್ದಾರೆ.

ಹಿಂದಿನ ಮೈತ್ರಿ ಸರಕಾರದಲ್ಲಿ ಷಡಕ್ಷರಿ ಸ್ವಾಮಿ ಅವರನ್ನು ನೂತನ ಅಧ್ಯಕ್ಷರಾಗಿ ನೇಮಕ ಮಾಡಲು ಮಾಜಿ ಸಿಎಂ ಸಿದ್ದರಾಮಯ್ಯ ಸೇರಿ ಅನೇಕರು ಪ್ರಯತ್ನ ನಡೆಸಿದ್ದರು. 

ಮತ್ತೊಂದೆಡೆ ಡಿ.ಕೆ.ಶಿವಕುಮಾರ್‌ ಅವರು ರಘುನಂದನ್‌ ರಾಮಣ್ಣ ಅವರ ಪರ ಬ್ಯಾಟಿಂಗ್ ಮಾಡಿದ್ದರೆ,  ದೇವೇಗೌಡರ ಕುಟುಂಬದಿಂದ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಕರೀಗೌಡ ಅವರ ನೇಮಕಕ್ಕೆ ಒಲವು ವ್ಯಕ್ತವಾಗಿತ್ತು. ಈ ಗೊಂದಲದಿಂದಾಗಿ ಆಯೋಗದ ಅಧ್ಯಕ್ಷರ ನೇಮಕ ನನೆಗುದಿಗೆ ಬಿದ್ದಿತ್ತು. 

click me!