
ಬೆಂಗಳೂರು (ಜೂ. 27): ಸಿಸಿಬಿ ಕ್ರೈಂ ಬ್ರ್ಯಾಂಚ್'ನಲ್ಲಿ ಕಾರ್ಯನಿರ್ವಹಿಸುತ್ತಿದ್ದ ನಿವೃತ್ತ ಪೊಲೀಸ್ ಅಧಿಕಾರಿ ಸಿದ್ದಲಿಂಗಯ್ಯ ಎನ್ನುವವರನ್ನು ಕೊಲೆ ಮಾಡಲಾಗಿದೆ.
ಮೂಲತಃ ಕನಕಪುರ ತಾಲೂಕಿನ ಬೊಮ್ಮನಹಳ್ಳಿ ಗ್ರಾಮದ ನಿವಾಸಿಯಾಗಿರುವ ಸಿದ್ದಲಿಂಗಯ್ಯ ಬೆಂಗಳೂರಿನ ಜರಗನಹಳ್ಳಿಯಲ್ಲಿ ವಾಸವಾಗಿದ್ದರು. ಸಿದ್ದಲಿಂಗಯ್ಯರ ಮನೆಯಲ್ಲೇ ವಾಸವಾಗಿದ್ದ ಶಂಕರ್ ಎಂಬಾತನೇ ಕೊಲೆ ಮಾಡಿದ್ದಾನೆ. ಕಣ್ಣಿಗೆ ಖಾರದಪುಡಿ ಎರಚಿ ಗೌಡಗೆರೆ ಗೇಟ್ ಬಳಿ ಶಂಕರ್ ಕೊಲೆ ಮಾಡಿ ಕೊಲೆ ಮಾಡಿ ನಂತರ ಚನ್ನಪಟ್ಟಣದ ಎಂ.ಕೆ.ದೊಡ್ಡಿ ಪೊಲೀಸ್ ಠಾಣೆಗೆ ಹೋಗಿ ಶರಣಾಗಿದ್ದಾನೆ.
ಎಂ.ಕೆ.ದೊಡ್ಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಚನ್ನಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಮೃತದೇಹ ಇಡಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.