ಪ್ರಣಾಳಿಕೆ ಸಮಿತಿಯಲ್ಲಿ ಡಿಕೆಶಿ, ಎಚ್‌.ಡಿ.ರೇವಣ್ಣಗೆ ಸ್ಥಾನ

Published : Jun 16, 2018, 08:15 AM IST
ಪ್ರಣಾಳಿಕೆ ಸಮಿತಿಯಲ್ಲಿ ಡಿಕೆಶಿ, ಎಚ್‌.ಡಿ.ರೇವಣ್ಣಗೆ ಸ್ಥಾನ

ಸಾರಾಂಶ

ಸಮ್ಮಿಶ್ರ ಸರ್ಕಾರದ ಪಾಲುದಾರ ಪಕ್ಷಗಳ ಸಾಮಾನ್ಯ ಕನಿಷ್ಠ ಕಾರ್ಯಕ್ರಮಗಳ ಕರಡು ಪಟ್ಟಿಸಿದ್ಧಪಡಿಸುವ ಸಂಬಂಧ ಉಭಯ ಪಕ್ಷಗಳ ಐವರು ಮುಖಂಡರನ್ನು ಒಳಗೊಂಡ ಸಮಿತಿ ರಚನೆಯಾಗಿದೆ.

ಬೆಂಗಳೂರು :  ಸಮ್ಮಿಶ್ರ ಸರ್ಕಾರದ ಪಾಲುದಾರ ಪಕ್ಷಗಳ ಸಾಮಾನ್ಯ ಕನಿಷ್ಠ ಕಾರ್ಯಕ್ರಮಗಳ ಕರಡು ಪಟ್ಟಿಸಿದ್ಧಪಡಿಸುವ ಸಂಬಂಧ ಉಭಯ ಪಕ್ಷಗಳ ಐವರು ಮುಖಂಡರನ್ನು ಒಳಗೊಂಡ ಸಮಿತಿ ರಚನೆಯಾಗಿದೆ.

ಕಾಂಗ್ರೆಸ್‌ನಿಂದ ಮಾಜಿ ಮುಖ್ಯಮಂತ್ರಿ ಎಂ.ವೀರಪ್ಪ ಮೊಯ್ಲಿ, ಸಚಿವರಾದ ಆರ್‌.ವಿ.ದೇಶಪಾಂಡೆ, ಡಿ.ಕೆ.ಶಿವಕುಮಾರ್‌, ಜೆಡಿಎಸ್‌ನಿಂದ ಸಚಿವ ಎಚ್‌.ಡಿ.ರೇವಣ್ಣ, ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಎಸ್‌.ಸುಬ್ರಮಣ್ಯ ಅವರು ಸಮಿತಿಯಲ್ಲಿದ್ದಾರೆ.

ಸಮಿತಿ ರಚನೆಯಾಗಿರುವುದನ್ನು ಸಮನ್ವಯ ಸಮಿತಿ ಸಂಚಾಲಕ ಹಾಗೂ ಜೆಡಿಎಸ್‌ನ ರಾಷ್ಟ್ರೀಯ ಮಹಾಪ್ರಧಾನ ಕಾರ್ಯದರ್ಶಿ ಡ್ಯಾನಿಶ್‌ ಅಲಿ ಶುಕ್ರವಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ಸಮಿತಿಯು ಮುಂದಿನ ಹತ್ತು ದಿನಗಳಲ್ಲಿ ಕಾಂಗ್ರೆಸ್‌ ಮತ್ತು ಜೆಡಿಎಸ್‌ ಪಕ್ಷಗಳು ಚುನಾವಣಾ ಪೂರ್ವ ಪ್ರಣಾಳಿಕೆಯಲ್ಲಿ ಘೋಷಿಸಿದ್ದ ಕಾರ್ಯಕ್ರಮಗಳ ಪೈಕಿ ಅನುಷ್ಠಾನ ಯೋಗ್ಯವಾದವುಗಳನ್ನು ಅಂತಿಮಗೊಳಿಸಿ ಸಾಮಾನ್ಯ ಕನಿಷ್ಠ ಕಾರ್ಯಕ್ರಮ (ಕಾಮನ್‌ ಮಿನಿಮಮ್‌ ಪ್ರೋಗ್ರಾಮ್‌) ಕರಡು ಸಿದ್ಧಪಡಿಸಲಿದೆ. ನಂತರ ಅದನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸಮನ್ವಯ ಸಮಿತಿ ಸಭೆಯಲ್ಲಿ ಮತ್ತೊಮ್ಮೆ ಚರ್ಚಿಸಿ ಅಂತಿಮಗೊಳಿಸಲಾಗುತ್ತದೆ. ನಂತರ ಅದನ್ನು ಜುಲೈ ಮೊದಲ ವಾರದಲ್ಲಿ ಮಂಡಿಸಲಿರುವ ಬಜೆಟ್‌ನಲ್ಲಿ ಅಳವಡಿಸಲಾಗುತ್ತದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ನೇತ್ರದಾನ ಮಾಡಿ ಸಾವಿನಲ್ಲೂ ಸಾರ್ಥಕತೆ ಮೆರೆದ ಲಲಿತಮ್ಮ
ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?