ಕೇಸು ಹಂಚಿಕೆಯ ವಿವರ ಬಹಿರಂಗಕ್ಕೆ ಸಿಜೆಐ ಚಿಂತನೆ

By Suvarna Web DeskFirst Published Jan 22, 2018, 8:45 AM IST
Highlights

ಸೂಕ್ಷ್ಮ ಪಿಐಎಲ್‌ಗಳ ಹಂಚಿಕೆಯಲ್ಲಿ ಪಾರದರ್ಶಕತೆ ತರುವ ಉದ್ದೇಶದಿಂದ, ಈ ಕುರಿತ ಮಾಹಿತಿಯನ್ನು ಸಾರ್ವಜನಿಕವಾಗಿ ಪ್ರಕಟಿಸುವ ವ್ಯವಸ್ಥೆ ಜಾರಿ ತರಲು ಭಾರತದ ಮುಖ್ಯ ನ್ಯಾಯಾಧೀಶ ನ್ಯಾ| ದೀಪಕ್ ಮಿಶ್ರಾ ಚಿಂತಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ನವದೆಹಲಿ: ಸೂಕ್ಷ್ಮ ಪಿಐಎಲ್‌ಗಳ ಹಂಚಿಕೆಯಲ್ಲಿ ಪಾರದರ್ಶಕತೆ ತರುವ ಉದ್ದೇಶದಿಂದ, ಈ ಕುರಿತ ಮಾಹಿತಿಯನ್ನು ಸಾರ್ವಜನಿಕವಾಗಿ ಪ್ರಕಟಿಸುವ ವ್ಯವಸ್ಥೆ ಜಾರಿ ತರಲು ಭಾರತದ ಮುಖ್ಯ ನ್ಯಾಯಾಧೀಶ ನ್ಯಾ| ದೀಪಕ್ ಮಿಶ್ರಾ ಚಿಂತಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ನ್ಯಾ. ಮಿಶ್ರಾ ಅವರು ಸಹ ನ್ಯಾಯಮೂರ್ತಿಗಳೊಂದಿಗೆ ಈ ಬಗ್ಗೆ ಚರ್ಚೆ ನಡೆಸಿದ್ದಾರೆ.

ಅಲ್ಲದೆ, ಪ್ರಕರಣಗಳ ಹಂಚಿಕೆಯಲ್ಲಿ ಸ್ಪಷ್ಟವಾದ ರೋಸ್ಟರ್ ವ್ಯವಸ್ಥೆ ಪಾಲಿಸುವ ಸಾಧ್ಯತೆಯಿದೆ. ಪ್ರಕರಣಗಳ ಹಂಚಿಕೆಯಲ್ಲಿ ಸಿಜೆಐ ನಿರ್ಧಾರಗಳನ್ನು ಕೋರ್ಟ್ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗುತ್ತದೆ ಎಂದು ಮೂಲಗಳು ಹೇಳಿವೆ.

click me!