87 ತಹಸೀಲ್ದಾರರು, 103 ಗ್ರೇಡ್‌ - 2 ತಹಸೀಲ್ದಾರ್‌ಗಳ ವರ್ಗ

Published : Jan 06, 2019, 09:04 AM IST
87 ತಹಸೀಲ್ದಾರರು, 103  ಗ್ರೇಡ್‌ - 2 ತಹಸೀಲ್ದಾರ್‌ಗಳ ವರ್ಗ

ಸಾರಾಂಶ

87 ತಹಸೀಲ್ದಾರರು ಹಾಗೂ 103 ಮಂದಿ ಗ್ರೇಡ್‌-2 ತಹಸೀಲ್ದಾರ್‌ರನ್ನು ವಿವಿಧ ಸ್ಥಳಗಳಿಗೆ ವರ್ಗಾವಣೆ ಮಾಡಿ ಕಂದಾಯ ಇಲಾಖೆಯಿಂದ ಆದೇಶ ಹೊರಡಿಸಲಾಗಿದೆ.  

ಬೆಂಗಳೂರು :  ಚುನಾವಣಾ ಆಯೋಗದ ಮಾರ್ಗಸೂಚಿ ಅನ್ವಯ 87 ತಹಸೀಲ್ದಾರರು ಹಾಗೂ 103 ಮಂದಿ ಗ್ರೇಡ್‌-2 ತಹಸೀಲ್ದಾರ್‌ರನ್ನು ವಿವಿಧ ಸ್ಥಳಗಳಿಗೆ ವರ್ಗಾವಣೆ ಮಾಡಿ ಕಂದಾಯ ಇಲಾಖೆ ಆದೇಶ ಹೊರಡಿಸಿದೆ.

ಶುಕ್ರವಾರ ಆದೇಶ ಹೊರಡಿಸಿರುವ ಕಂದಾಯ ಇಲಾಖೆಯು, ಚುನಾವಣಾ ಆಯೋಗದ ಸೂಚನೆಯಂತೆ ಸಾರ್ವಜನಿಕ ಹಾಗೂ ಆಡಳಿತ ಹಿತದೃಷ್ಟಿಯಿಂದ ವರ್ಗಾವಣೆ ಮಾಡಲಾಗಿದೆ ಎಂದು ಹೇಳಿದೆ. ಈ ಮೂಲಕ ಪುರಸಭೆ ತಹಸೀಲ್ದಾರ್‌, ಚುನಾವಣಾ ತಹಸೀಲ್ದಾರ್‌, ಗ್ರೇಡ್‌-1 ಹಾಗೂ ಗ್ರೇಡ್‌-2 ತಹಸೀಲ್ದಾರ್‌ ಸೇರಿದಂತೆ ವಿವಿಧ ಹುದ್ದೆಗಳ ಒಟ್ಟು 190 ಮಂದಿಯನ್ನು ವರ್ಗಾವಣೆ ಮಾಡಿ ಆದೇಶಿಸಲಾಗಿದೆ.

ಲೋಕಸಭೆ ಚುನಾವಣೆಗೆ ಪ್ರಸ್ತುತ ಮತದಾರರ ಪಟ್ಟಿಪರಿಷ್ಕರಣೆ ನಡೆಯುತ್ತಿದೆ. ಇಷ್ಟೂಮಂದಿ ಅಧಿಕಾರಿಗಳು ಮತದಾರರ ಪಟ್ಟಿಪರಿಷ್ಕರಣೆ ಕಾರ್ಯದಲ್ಲಿ ಭಾಗಿಯಾಗಿದ್ದಾರೆ. ಹೀಗಾಗಿ ಮತದಾರರ ಪಟ್ಟಿಪರಿಷ್ಕರಣೆ ಮುಗಿದ ಬಳಿಕ ಪ್ರಸ್ತುತ ವರ್ಗಾವಣೆಯಾಗಿರುವ ಸ್ಥಳಕ್ಕೆ ನಿಯುಕ್ತಿಗೊಳ್ಳಬೇಕು. ಅಲ್ಲಿಯವರೆಗೆ ಈಗಿರುವ ಹುದ್ದೆಗಳಲ್ಲೇ ಮುಂದುವರೆಯಬೇಕು ಎಂದೂ ಸಹ ಚುನಾವಣಾ ಆಯೋಗದ ನಿರ್ದೇಶನದ ಮೇರೆಗೆ ಆದೇಶದಲ್ಲಿ ತಿಳಿಸಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಪವರ್‌ ಪಾಯಿಂಟ್‌: ದ್ವೇಷ ಭಾಷಣ ಮಸೂದೆಯಿಂದ ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಧಕ್ಕೆ
'ಲಕ್ಷ್ಮಿ ಹೆಬ್ಬಾಳ್ಕರ್ ಅವರೇ, ಫೆಬ್ರವರಿ-ಮಾರ್ಚ್ ಹಣ ಯಾವಾಗ ಬರುತ್ತೆ? ಸದನಕ್ಕೆ ತಪ್ಪು ಮಾಹಿತಿ ವಿರುದ್ಧ ರೊಚ್ಚಿಗೆದ್ದ ಗೃಹಲಕ್ಷ್ಮಿಯರು!