
ನವದೆಹಲಿ (ಮಾ. 18): ರಾಹುಲ್ ಗಾಂಧಿ ಟೀಕೆಗೆ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ತಿರುಗೇಟು ನೀಡಿದ್ದಾರೆ.
ರಾಹುಲ್ ಗಾಂಧಿ ಭಾಷಣದಲ್ಲಿ ವಸ್ತು ನಿಷ್ಠೆಯ ಕೊರತೆಯಿದೆ. ಮತ್ತೆ ಅದೇ ಅಪಹಾಸ್ಯ ಭಾಷಣವನ್ನೇ ಮಾಡಿದ್ದಾರೆ. ಹೀಗಾಗಿ ಕಾಂಗ್ರೆಸ್ ಚುನಾವಣೆಯಲ್ಲಿ ಠೇವಣಿಯನ್ನೇ ಕಳೆದುಕೊಂಡಿದೆ ಎಂದು ನಿರ್ಮಲಾ ಸೀತಾರಾಮನ್ ವಾಗ್ದಾಳಿ ನಡೆಸಿದ್ದಾರೆ.
ಬಿಜೆಪಿ ಯಾವಾಗಲೂ ರೈತರಪರವಿದೆ. ಕಾಂಗ್ರೆಸ್ ರೈತರಿಗೆ ಮೋಸ ಮಾಡಿದೆ. ಬಿಜೆಪಿ ದೇಶಭಕ್ತರ ಪರ, ಆದ್ರೆ ಕಾಂಗ್ರೆಸ್ ಭಯೋತ್ಪಾದಕರಿಗಾಗಿ ಅಳುತ್ತಿದೆ. ರಾಹುಲ್ ಭಾಷಣದಲ್ಲಿ ಸ್ವಾತಂತ್ರ್ಯ ಹೋರಾಟಗಾರರನ್ನು ಅವಮಾನಿಸಿದ್ದಾರೆ. ರಾಹುಲ್ ಗಾಂಧಿ ಹಿಂದೂಗಳನ್ನು ಮತ್ತೆ ಅವಮಾನಿಸಿ, ಅಪಹಾಸ್ಯ ಮಾಡಿದ್ದಾರೆ. ಕಾಂಗ್ರೆಸ್ ಪಕ್ಷ ಯಾವಾಗಲೂ ವೋಟ್ಬ್ಯಾಂಕ್ ರಾಜಕಾರಣ ಮಾಡುತ್ತದೆ. ದೇಶದಲ್ಲಿ ತುರ್ತು ಪರಿಸ್ಥಿತಿ ಹೇರಿದ್ದು, ಇದೇ ಕಾಂಗ್ರೆಸ್ ಹೊರತು ಬಿಜೆಪಿಯಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.
ರಾಹುಲ್ ಅಮಿತ್ ಶಾ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಆದರೆ ಅದು ಅಪ್ರಸ್ತುತ. ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಈಗಾಗಲೇ ಕ್ಲಿನ್ಚಿಟ್ ಪಡೆದಿದ್ದಾರೆ. ಆದರೆ ಇದನ್ನು ತಿಳಿಯದೇ ರಾಹುಲ್ ಗಾಂಧಿ ಶಾ ಅವರನ್ನು ಕೊಲೆ ಆರೋಪಿ ಅಂತಾರೆ
ರಾಹುಲ್ ಗಾಂಧಿ ಕೂಡ ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಆರೋಪಿ..! ಎಂದು ಟಾಂಗ್ ನೀಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.