
ರಾಂಚಿ(ಜ.05): ಮೇವು ಹಗರಣದಲ್ಲಿ ದೋಷಿಗಳಾಗಿರುವ ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಮತ್ತು ಇತರ 10 ಮಂದಿಯ ವಿರುದ್ಧದ ಶಿಕ್ಷೆಯ ಪ್ರಮಾಣವನ್ನು ಸಿಬಿಐ ಕೋರ್ಟ್ ಶನಿವಾರ ಮಧ್ಯಾಹ್ನ 2 ಗಂಟೆಗೆ ಪ್ರಕಟಿಸಲಿದೆ. ಡಿ. 23ರಂದು ದೋಷಿ ಎಂದು ಘೋಷಿಸಲ್ಪಟ್ಟ ಬಳಿಕ ಬಿರ್ಸಾ ಮುಂಡಾ ಕೇಂದ್ರೀಯ ಜೈಲಿನಲ್ಲಿರುವ ಲಾಲು, ಶಿಕ್ಷೆಯ ಪ್ರಮಾಣದ ಕುರಿತ ವಾದ ಮಂಡನೆಗೆ ಶುಕ್ರವಾರ ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರಾದರು.
ಈ ವೇಳೆ ತಮ್ಮ ವಯಸ್ಸು ಹಾಗೂ ಅನಾರೋಗ್ಯವನ್ನು ಪರಿಗಣಿಸಿ ಕಡಿಮೆ ಶಿಕ್ಷೆ ನೀಡುವಂತೆ ಲಾಲು ಕೋರಿಕೊಂಡರು. ಉಭಯ ಬಣಗಳ ವಾದ- ಪ್ರತಿವಾದ ಆಲಿಸಿದ ನ್ಯಾಯಾಲಯ ಶನಿವಾರ ಮಧ್ಯಾಹ್ನ 2 ಗಂಟೆಗೆ ಶಿಕ್ಷೆಯ ಪ್ರಮಾಣ ಪ್ರಕಟಿಸುವುದಾಗಿ ಹೇಳಿತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.