ಕಣಿವೆಗೆ ಗಿರೀಶ್, ಲಡಾಕ್‌ಗೆ ಮಾಥೂರ್ ಮೊದಲ ಲೆ. ಗವರ್ನರ್ ಆಗಿ ನೇಮಕ!

By Web DeskFirst Published Oct 31, 2019, 4:01 PM IST
Highlights

ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನ ರದ್ದತಿ | ಜಮ್ಮು ಮತ್ತು ಕಾಶ್ಮೀರ ಹಾಗೂ ಲಡಾಖ್ ಕೇಂದ್ರಾಡಳಿತ ಪ್ರದೇಶಗಳೆಂದು ವಿಭಜನೆ| ಲಡಾಕ್ ಕೇಂದ್ರಾಡಳಿತ ಪ್ರದೇಶದ ಮೊದಲ ಲೆಫ್ಟಿನೆಂಟ್ ಗವರ್ನರ್ ನೇಮಕ| ಲೆಫ್ಟಿನೆಂಟ್ ಗವರ್ನರ್ ಆಗಿ ರಾಧಾ ಕೃಷ್ಣ ಮಾಥೂರ್  ಪ್ರಮಾಣವಚನ| ಜಮ್ಮು ಮತ್ತು ಕಾಶ್ಮೀರದ ಕೇಂದ್ರಾಡಳಿತ ಪ್ರದೇಶದ ಮೊದಲ ಲೆಫ್ಟಿನೆಂಟ್ ಗವರ್ನರ್ ನೇಮಕ| ಲೆಫ್ಟಿನೆಂಟ್ ಗವರ್ನರ್ ಆಗಿ ಗಿರೀಶ್ ಚಂದ್ರ ಮುರ್ಮು ಅಧಿಕಾರ ಸ್ವೀಕಾರ| 

ಶ್ರೀನಗರ(ಅ.31): ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನ ರದ್ದತಿ ಬಳಿಕ, ಕಣಿವೆಯನ್ನು ಜಮ್ಮು ಮತ್ತು ಕಾಶ್ಮೀರ ಹಾಗೂ ಲಡಾಖ್ ಕೇಂದ್ರಾಡಳಿತ ಪ್ರದೇಶಗಳೆಂದು ವಿಭಾಗಿಸಲಾಗಿದೆ.  

ಸತ್ಯಪಾಲ್​ ಮಲಿಕ್​ ಎತ್ತಂಗಡಿ: ಜಮ್ಮು-ಕಾಶ್ಮೀರ, ಲಡಾಖ್​​ಗೆ ಹೊಸ ಗವರ್ನರ್​ಗಳ ನೇಮಕ

Leh: Radha Krishna Mathur takes oath as the first Lieutenant Governor of Union Territory of Ladakh. pic.twitter.com/lYpybg1YD0

— ANI (@ANI)

ಅದರಂತೆ ಲಡಾಕ್ ಕೇಂದ್ರಾಡಳಿತ ಪ್ರದೇಶದ ಮೊದಲ ಲೆಫ್ಟಿನೆಂಟ್ ಗವರ್ನರ್ ಆಗಿ ರಾಧಾ ಕೃಷ್ಣ ಮಾಥೂರ್ ಇಂದು ಪ್ರಮಾಣವಚನ ಸ್ವೀಕರಿಸಿದರು.  ಜಮ್ಮು-ಕಾಶ್ಮೀರ ಹೈಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ನ್ಯಾಯಾಧೀಶ ಗೀತಾ ಮಿತ್ತಲ್ ಮಾಥೂರ್ ಅವರಿಗೆ ಪ್ರತಿಜ್ಞಾವಿಧಿ ಬೋಧಿಸಿದರು.

‘370 ರದ್ದತಿ ಅಪಹಾಸ್ಯ ಮಾಡಿದವರನ್ನು ಇತಿಹಾಸ ನೋಡಿಕೊಳ್ಳುತ್ತೆ’!

ಅಲ್ಲದೇ ಜಮ್ಮು ಮತ್ತು ಕಾಶ್ಮೀರ ಕೇಂದ್ರಾಡಳಿತ ಪ್ರದೇಶಗಳಿಗೆ ನೂತನ ಗವರ್ನರ್ ಆಗಿ ಗಿರೀಶ್ ಚಂದ್ರ ಮುರ್ಮು ಅಧಿಕಾರ ವಹಿಸಿಕೊಂಡರು. ಶ್ರೀನಗರದಲ್ಲಿ ನಡೆದ ಸಮಾರಂಭದಲ್ಲಿ ಮುರ್ಮು ಅವರಿಗೆ ಪ್ರತಿಜ್ಞಾವಿಧಿ ಬೋಧಿಸಲಾಯಿತು.

Srinagar: Girish Chandra Murmu takes oath as the first Lt. Governor of the Union territory of Jammu and Kashmir. The oath was administered by Chief Justice of J&K High Court, Gita Mittal. pic.twitter.com/SFFmBbfDMt

— ANI (@ANI)

ದಶಕಗಳ ಕಾಲ ಜಮ್ಮು -ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನ ಸಂವಿಧಾನ ವಿಧಿ 370ನ್ನು ರದ್ದುಪಡಿಸಿದ ಸುಮಾರು 3 ತಿಂಗಳ ನಂತರ ಜಮ್ಮು ಮತ್ತು ಕಾಶ್ಮೀರ ಎಂದು ಎರಡು ಪ್ರತ್ಯೇಕ ಕೇಂದ್ರಾಡಳಿತ ಪ್ರದೇಶಗಳನ್ನಾಗಿ ರಚಿಸಲಾಗಿದೆ.

ಜಮ್ಮು ಕಾಶ್ಮೀರದಲ್ಲಿ ಇಂದಿನಿಂದ ಹೊಸ ಅಧ್ಯಾಯ! ಏನೇನು ಬದಲಾಗಲಿದೆ?

RK Mathur, Lieutenant Governor of the Union Territory of Ladakh, after taking oath: Development is composite, efforts will be made to carry out development work in all areas. A development package will be made, and education & health will play an important role in it. pic.twitter.com/RDZsHBsbhF

— ANI (@ANI)


ಇದುವರೆಗೆ ಜಮ್ಮು ಮತ್ತು ಕಾಶ್ಮೀರಕ್ಕೆ ರಾಜ್ಯಪಾಲರಾಗಿದ್ದ ಸತ್ಯಪಾಲ್ ಮಲಿಕ್ ಅವರನ್ನು ಗೋವಾ ರಾಜ್ಯಪಾಲರಾಗಿ ವರ್ಗಾಯಿಸಲಾಗಿದೆ.

click me!