ನಿಂತಿದ್ದ ಕಾರಿಗೆ ಡಿಕ್ಕಿ ಹೊಡೆದವನ ಮೇಲೆ ಟ್ಯಾಂಕರ್ ಹರಿದು ಸಾವು

Published : Jan 03, 2018, 06:38 PM ISTUpdated : Apr 11, 2018, 01:07 PM IST
ನಿಂತಿದ್ದ ಕಾರಿಗೆ ಡಿಕ್ಕಿ ಹೊಡೆದವನ ಮೇಲೆ ಟ್ಯಾಂಕರ್ ಹರಿದು ಸಾವು

ಸಾರಾಂಶ

ಡೀಸೆಲ್ ಮುಗಿದು ಎಲೆಕ್ಟ್ರಾನಿಕ್ಸ್ ಸಿಟಿ ಪ್ಲೈ ಓವರ್ ಮೇಲೆ ನಿಂತಿದ್ದ ವ್ಯಾಗನರ್ ಕಾರಿಗೆ ಬೈಕ್ ಸವಾರನೊಬ್ಬ  ಡಿಕ್ಕಿ ಹೊಡೆದು ಕೆಳಗೆ ಬೀಳುತ್ತಿದ್ದಂತೆ ಆತನ ಮೇಲೆ ಹಿಂದಿನಿಂದ ಬರುತ್ತಿದ್ದ ಟೆಂಪೋ ಟ್ರ್ಯಾವಲರ್ ಹರಿದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈ ಘಟನೆ ಎಲೆಕ್ಟ್ರಾನಿಕ್ ಸಿಟಿ ಎಲಿವೆಟೆಡ್ ಪ್ಲೇ ಓವರ್ ಮೇಲೆ ನಡೆದಿದೆ.  ತೇಜಸ್ವಿ ಪೊನಪೋಲ್ಲಿ (32) ಅಪಘಾತದಲ್ಲಿ ಮೃತಪಟ್ಟ ದುರ್ದೈವಿ.

ಬೆಂಗಳೂರು (ಜ.03): ಡೀಸೆಲ್ ಮುಗಿದು ಎಲೆಕ್ಟ್ರಾನಿಕ್ಸ್ ಸಿಟಿ ಪ್ಲೈ ಓವರ್ ಮೇಲೆ ನಿಂತಿದ್ದ ವ್ಯಾಗನರ್ ಕಾರಿಗೆ ಬೈಕ್ ಸವಾರನೊಬ್ಬ  ಡಿಕ್ಕಿ ಹೊಡೆದು ಕೆಳಗೆ ಬೀಳುತ್ತಿದ್ದಂತೆ ಆತನ ಮೇಲೆ ಹಿಂದಿನಿಂದ ಬರುತ್ತಿದ್ದ ಟೆಂಪೋ ಟ್ರ್ಯಾವಲರ್ ಹರಿದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈ ಘಟನೆ ಎಲೆಕ್ಟ್ರಾನಿಕ್ ಸಿಟಿ ಎಲಿವೆಟೆಡ್ ಪ್ಲೇ ಓವರ್ ಮೇಲೆ ನಡೆದಿದೆ.  ತೇಜಸ್ವಿ ಪೊನಪೋಲ್ಲಿ (32) ಅಪಘಾತದಲ್ಲಿ ಮೃತಪಟ್ಟ ದುರ್ದೈವಿ.

ಎಲಿವೆಟೆಡ್ ಪ್ಲೇ ಓವರ್ ಮೇಲೆ 3.30 ರ ಸುಮಾರಿನಲ್ಲಿ ಕೆಂಪು ಬಣ್ಣದ ವ್ಯಾಗನಾರ್ ಕಾರು ಡೀಸೆಲ್ ಮುಗಿದು ನಿಂತಿತ್ತು.  ಹಿಂದಿನಿಂದ ವೇಗವಾಗಿ ಬಂದ ಬೈಕ್ ಸವಾರ ಮೊದಲು ಕಾರಿಗೆ ಗುದ್ದಿ ಕೆಳಗೆ ಬಿದ್ದಿದ್ದು ಹಿಂದಿನಿಂದ ಬಂದ ಟಿಟಿ ವಾಹನ ಹರಿದು ಸ್ಥಳದಲ್ಲೇ ತೇಜಸ್ವಿ ಸಾವನಪ್ಪಿದ್ದಾನೆ.  ಇನ್ನು ಘಟನೆಯಿಂದಾಗಿ ಫ್ಲೈ ಓವರ್ ಮೇಲೆ ಕಿಲೋಮೀಟರ್ ಉದ್ದ ವಾಹನಗಳು ಸಾಲುಗಟ್ಟಿ ನಿಂತಿದ್ದು ವಾಹನ ಸವಾರರು ಪರದಾಡುವಂತಾಗಿದೆ. ಇನ್ನು ಎಲಿವೆಟೆಡ್ ಪ್ಲೇ ಓವರ್ ಮೇಲೆ ಪದೇ ಪದೇ ಇದೆ ರೀತಿಯ ಅಪಘಾತಗಳು ಸಂಭವಿಸುತ್ತಿದ್ದು ಹೆದ್ದಾರಿ ಪ್ರಾಧಿಕಾರ ಈ ಪ್ಲೇ ಓವರ್ ಅನ್ನು ಸರಿಯಾಗಿ ನಿರ್ವಹಣೆ ಮಾಡದಿರುವುದೇ ಇಂತಹ ಘಟನೆಗೆ ಕಾರಣವಾಗಿದೆ.  ಇಂದು ಸಹ ಡೀಸೆಲ್ ಮುಗಿದಿದ್ದ ಕಾರಿನ ಮಾಲೀಕರು ಹೆದ್ದಾರಿ ಅಧಿಕಾರಿಗಳಿಗೆ ತಿಳಿಸಿದ್ದರು. ಆದರೆ  ವಾಹನವನ್ನು ತೆರವುಗೊಳಿಸಲು ಮುಂದಾಗದಿರುವುದೇ ಇಂದಿನ ಅಪಘಾತಕ್ಕೆ ಕಾರಣವಾಗಿದೆ ಎಂದು ಸಾರ್ವಜನಿಕರ ಆರೋಪವಾಗಿದೆ.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ದುಬಾರೆ ಶಿಬಿರದಲ್ಲಿ ಕಳೆದ 10 ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದ ತಕ್ಷ ಹೆಸರಿನ ಆನೆ ಸಾವು
ಕಾರಲ್ಲ, ಸರ್ಕಾರ ಕೆಲಸಕ್ಕೆ ಓಡಾಡಲು ಹೆಲಿಕಾಪ್ಟರ್, ವಿಮಾನ ಖರೀದಿಗೆ ಡಿಕೆಶಿ ನೇತೃತ್ವದಲ್ಲಿ ಸಭೆ