ದೇಶದಲ್ಲಿ ಗಂಟೆಗೆ 17 ಮಂದಿ ರಸ್ತೆ ಅಪಘಾತಕ್ಕೆ ಬಲಿ..!

Published : Sep 06, 2017, 10:16 PM ISTUpdated : Apr 11, 2018, 01:00 PM IST
ದೇಶದಲ್ಲಿ ಗಂಟೆಗೆ 17 ಮಂದಿ ರಸ್ತೆ ಅಪಘಾತಕ್ಕೆ ಬಲಿ..!

ಸಾರಾಂಶ

ಶೇ.86 ಅಪಘಾತಗಳು ಕರ್ನಾಟಕ, ತಮಿಳುನಾಡು, ಉತ್ತರ ಪ್ರದೇಶ, ಆಂಧ್ರಪ್ರದೇಶ ಸೇರಿದಂತೆ 13 ರಾಜ್ಯಗಳಲ್ಲಿ ಸಂಭವಿಸಿದೆ.

ನವದೆಹಲಿ(ಸೆ.06): ದೇಶದಲ್ಲಿ ಕಳೆದ ವರ್ಷ ಪ್ರತಿ ಗಂಟೆಗೆ ಸರಾಸರಿ 55 ಅಪಘಾತಗಳು ನಡೆದಿದ್ದರೆ, 17 ಮಂದಿ ಸಾವಿಗೀಡಾಗಿದ್ದಾರೆ ಎಂಬುದು ಅಂಕಿ ಅಂಶಗಳಿಂದ ತಿಳಿದು ಬಂದಿದೆ.

ಮೃತರಲ್ಲಿ ಅರ್ಧದಷ್ಟು ಜನರು 18-35ರ ಹರೆಯದ ನಡುವಿನವರು. ಆದರೆ ಹಿಂದಿನ ವರ್ಷಕ್ಕೆ ಹೋಲಿಸಿದರೆ ರಸ್ತೆ ಅಪಘಾತಗಳ ಪ್ರಮಾಣ ಶೇ.4.1 ಮತ್ತು ಅಪಘಾತಗಳಲ್ಲಿ ಸಾವಿಗೀಡಾದವರ ಪ್ರಮಾಣ ಶೇ.3.2ರಷ್ಟು ಇಳಿಕೆಯಾಗಿದೆ.

ದಿನದಲ್ಲಿ ಸರಾಸರಿ 400ಕ್ಕೂ ಜನರು ರಸ್ತೆ ಅಪಘಾತಗಳಲ್ಲಿ ಸಾಯುತ್ತಿದ್ದಾರೆ. ಕಳೆದ ವರ್ಷ 4,80,652 ರಸ್ತೆ ಅಪಘಾತಗಳು ಸಂಭವಿಸಿವೆ, ಅದರಲ್ಲಿ 1,50,785 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. 4,95,624 ಮಂದಿ ಗಾಯಗೊಂಡಿದ್ದಾರೆ. ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಬಿಡುಗಡೆ ಮಾಡಿರುವ 2016ರ ಭಾರತದಲ್ಲಿನ ರಸ್ತೆ ಅಪಘಾತಗಳು ವರದಿಯಲ್ಲಿ ಈ ಅಂಕಿ ಅಂಶಗಳು ಕಂಡುಬಂದಿವೆ.

ರಸ್ತೆ ಅಪಘಾತಗಳಲ್ಲಿ ಸಾವಿಗೀಡಾದವರಲ್ಲಿ ಶೇ.46.3 ಮಂದಿ ಯುವಕರಾಗಿದ್ದು, 18-35ರ ವಯಸ್ಸಿನೊಳಗಿನವರು. ಶೇ.86 ಅಪಘಾತಗಳು ಕರ್ನಾಟಕ, ತಮಿಳುನಾಡು, ಉತ್ತರ ಪ್ರದೇಶ, ಆಂಧ್ರಪ್ರದೇಶ ಸೇರಿದಂತೆ 13 ರಾಜ್ಯಗಳಲ್ಲಿ ಸಂಭವಿಸಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಬೆಂಗಳೂರು: 2 ಲಕ್ಷ ಬೆಲೆಯ ಗಿಳಿ ರಕ್ಷಿಸಲು ಹೋಗಿ ಪ್ರಾಣ ಕಳೆದುಕೊಂಡ ಯುವಕ!
ವಿಮಾನದಲ್ಲಿ ಹೃದಯಾಘಾತ- ಅಮೆರಿಕ ಪ್ರಜೆಯ ಜೀವ ಉಳಿಸಿದ ಡಾ. ಅಂಜಲಿ ನಿಂಬಾಳ್ಕರ್